ಕೂಡಿಗೆ: ಭೌಗೋಳಿಕ ಮತ್ತು ಪ್ರಾಂತೀಯವಾಗಿ ವೈವಿಧ್ಯಮಯತೆಯಿಂದ ಕೂಡಿದ ಭಾರತದ ಸಂಪತ್ತಿನ ರಕ್ಷಣೆ ಮಾಡಲು ರಾಷ್ಟಿçÃಯ ಐಕ್ಯತೆ ಅವಶ್ಯಕ ಎಂದು ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ಕೆ.ಕೆ. ಧರ್ಮಪ್ಪ ಹೇಳಿದರು.
ಚಿಕ್ಕ ಅಳುವಾರದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ರಾಷ್ಟಿçÃಯ ಸೇವಾ ಯೋಜನೆಯ ವತಿಯಿಂದ ಮಾನವಿಕ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟಿçÃಯ ಏಕತಾ ದಿವಸದ ಆಚರಣೆ ಮತ್ತು ಏಕತಾ ಓಟ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟಿçÃಯ ಸೇವಾ ಯೋಜನೆಯ ಸಂಯೋಜಕ ಡಾ. ಚಂದ್ರಶೇಖರ ಗಜಾನನ ಜೋಶಿಯವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಸತ್ಯ ನಿಷ್ಠೆಯಿಂದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೀವರಸಾಯನಶಾಸ್ತç ವಿಭಾಗದ ಸಹ ಪ್ರಾಧ್ಯಾಪಕ ಡಾ. ಕೆ.ಎಸ್. ಚಂದ್ರಶೇಖರಯ್ಯ ಮಾತನಾಡಿ, ಭವ್ಯ ಭಾರತದ ನಿರ್ಮಾಣವಾಗಬೇಕಾದರೆ ಒಂದೇ ಭಾರತ, ಶ್ರೇಷ್ಠ ಭಾರತ ಎಂಬ ಪರಿಕಲ್ಪನೆಯ ಅಡಿಯಲ್ಲಿ ಸರ್ದಾರ್ ಪಟೇಲ್ ಅವರ ಏಕತೆಯ ಮಂತ್ರವನ್ನು ಜೀವನದ ಅವಿಭಾಜ್ಯ ಅಂಗವಾಗಿ ಮಾಡಿಕೊಳ್ಳಬೇಕು ಎಂದರು. ಇದೇ ಸಂದರ್ಭ ರಾಷ್ಟಿಯ ಏಕತಾ ದಿವಸದ ಆಚರಣೆ ಮತ್ತು ಏಕತಾ ಓಟ ಕಾರ್ಯಕ್ರಮದ ಅಂಗವಾಗಿ ಚಿಕ್ಕ ಅಳುವಾರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸೂಕ್ಷಾ÷್ಮಣು ಜೀವ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಗುಣಶ್ರಿ, ವಿವಿಧ ವಿಭಾಗದ ಉಪನ್ಯಾಸಕರು, ಬೋಧಕೇತರ ವೃಂದ, ತಾಂತ್ರಿಕ ವೃಂದ, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಾರ್ಥನೆಯನ್ನು ಆಶಿನಿ, ಸ್ವಾಗತವನ್ನು ಗಣೇಶ್, ಶ್ರೇಯಾ ವಂದಿಸಿದರು. ವಿದ್ಯಾರ್ಥಿ ದಿವಾಕರ್ ನಾಯಕ್ ನಿರೂಪಿಸಿದರು.