ಕರಿಕೆ, ನ. ೨: ಕರಿಕೆ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಸಮುದಾಯದತ್ತ ಶಾಲೆ ಶೈಕ್ಷಣಿಕ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರಿಕೆ ಕಾಲೋನಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಚ್ಚಾಡೊ ಪಾಲ್ಗೊಂಡಿದ್ದರು. ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹೊದ್ದೆಟ್ಟಿ ಮಿತ್ರಕುಮಾರ ವಹಿಸಿದ್ದರು. ಮುಖ್ಯ ಶಿಕ್ಷಕ ಎನ್.ಎಸ್. ಕುಮಾರ್ ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ವಿವರಿಸಿದರು. ವೀಕ್ಷಕರಾಗಿ ಕರಿಕೆ ಪ್ರೌಢಶಾಲೆ ಶಿಕ್ಷಕ ನಿಂಗಣ್ಣ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ನಳಿನಾಕ್ಷಿ ಬಿ.ಡಿ. ಸುಮತಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.