ಮಡಿಕೇರಿ, ನ. ೩: ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ, ನಗರದ ತಜ್ಞ ವೈದ್ಯರುಗಳಿಂದ ತಾ. ೪ ರಂದು (ಇಂದು) ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೩ ಗಂಟೆಯವರೆಗೆ ವೀರಾಜಪೇಟೆ ತಾಲೂಕು ಬಾಳೆಲೆ ಗ್ರಾಮದ ಕೊಡವ ಸಮಾಜದಲ್ಲಿ ಆರೋಗ್ಯ ತಪಾಸಣಾ ಉಚಿತ ಶಿಬಿರ ನಡೆಯಲಿದೆ. ತಪಾಸಣೆಯಲ್ಲಿ ಪಾಲ್ಗೊಳ್ಳುವ ರೋಗಿಗಳಿಗೆ ಔಷಧಿಯನ್ನು ಉಚಿತವಾಗಿ ನೀಡಲಾಗುವದು ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಕಾರ್ಯಪ್ಪ ತಿಳಿಸಿದ್ದಾರೆ.