ಮಡಿಕೇರಿ, ನ. ೩: ಕರ್ನಾಟಕ ಗ್ರಾಮೀಣ ಬ್ಯಾಂಕ್, ಪ್ರಾದೇಶಿಕ ಕಚೇರಿ, ಮಡಿಕೇರಿ ಇದರ ವತಿಯಿಂದ ಜಾಗೃತಿ ಸಪ್ತಾಹದ ಅಂಗವಾಗಿ ಜಾಥಾವನ್ನು ಏರ್ಪಡಿಸಲಾಗಿತ್ತು. ಪ್ರಾದೇಶಿಕ ವ್ಯವಸ್ಥಾಪಕರಾದ ಕೆ. ದಾಮೋದರ ಭಟ್ ಜಾಥಾಕ್ಕೆ ಚಾಲನೆ ನೀಡಿದರು. ಭ್ರಷ್ಟಾಚಾರದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವದು ಈ ಜಾಥಾದ ಉದ್ದೇಶವಾಗಿತ್ತು. ಪ್ರಾದೇಶಿಕ ಕಚೇರಿ ಹಾಗೂ ಮಡಿಕೇರಿ ಶಾಖೆಯ ಸಿಬ್ಬಂದಿಗಳು ಜಾಥಾದಲ್ಲಿ ಪಾಲ್ಗೊಂಡರು.