ಮಡಿಕೇರಿ, ನ.೩ : ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ನಗರದ ರೋಟರಿ ಮಿಸ್ಟಿ ಹಿಲ್ಸ್ ಹಾಗೂ ಕೂರ್ಗ್ ಸೈನ್ಸ್ ಅಂಡ್ ಎನ್ವಿರಾನ್‌ಮೆಂಟಲ್ ಫೌಂಡೇಶನ್ ಆಶ್ರಯದಲ್ಲಿ ೨೭ನೇ ರಾಷ್ಟಿçÃಯ ಮಕ್ಕಳ ವಿಜ್ಞಾನ ಸಮಾವೇಶ-೨೦೧೯ದ ಪೂರ್ವಭಾವಿಯಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಮಾರ್ಗದರ್ಶಿ ಶಿಕ್ಷಕರ ಕಾರ್ಯಾಗಾರವು ತಾ. ೪ ರಂದು (ಇಂದು) ಬೆಳಗ್ಗೆ ೯.೪೫ ಗಂಟೆಗೆ ನಗರದ ರೋಟರಿ ಮಕ್ಕಳ ವಿಜ್ಞಾನ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ಈ ತರಬೇತಿ ಕಾರ್ಯಾಗಾರಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಜ್ಞಾನ/ ಆಸಕ್ತ ಶಿಕ್ಷಕರನ್ನು ನಿಯೋಜಿಸಬೇಕೆಂದು ಸಂಬAಧಿಸಿದ ಶಾಲಾ ಮುಖ್ಯ (ಮೊದಲ ಪುಟದಿಂದ) ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್.ಮಚ್ಚಾಡೋ ತಿಳಿಸಿದ್ದಾರೆ.

ಜಿಲ್ಲಾಮಟ್ಟದಲ್ಲಿ ಉತ್ತಮ ವೈಜ್ಞಾನಿಕ ಯೋಜನಾ ಪ್ರಬಂಧ ಮಂಡಿಸಿ ಆಯ್ಕೆಗೊಳ್ಳಲಿರುವ ಮೊದಲ ೧೦ ತಂಡಗಳು ಡಿಸೆಂಬರ್, ೧೬ ರಿಂದ ೧೮ ರವರೆಗೆ ಮೂರು ದಿನಗಳ ಕಾಲ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ನಡೆಯಲಿರುವ ೨೭ ನೇ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲೂ ಮತ್ತು ರಾಜ್ಯ ಮಟ್ಟದಲ್ಲಿ ಆಯ್ಕೆಯಾಗುವ ತಂಡಗಳು ಡಿಸೆಂಬರ್ ೨೭-೩೧, ೨೦೧೯ ರಂದು ೫ ದಿನಗಳ ಕಾಲ ಕೇರಳದ ತಿರುವನಂತಪುರ ನಗರದಲ್ಲಿ ಜರುಗುವ ರಾಷ್ಟಿçÃಯ ಮಕ್ಕಳ ವಿಜ್ಞಾನ ಸಮಾವೇಶ ೨೦೧೯ ದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿವೆ ಎಂದು ತಿಳಿಸಿದ್ದಾರೆ. ಈ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಸಂಬAಧಿಸಿದAತೆ ಹೆಚ್ಚಿನ ಮಾಹಿತಿಗೆ (೯೪೮೧೪೩೧೨೬೩) ಅಥವಾ (೯೦೦೮೮ ೯೯೩೦೫) ಅವರನ್ನು ಸಂಪರ್ಕಿಸಲು ತಿಳಿಸಿದೆ.