ಸೋಮವಾರಪೇಟೆ, ನ.೪: ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ರದ್ದು ಪಡಿಸಿದ್ದು, ಸರ್ಕಾರದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಡಿವೈಎಸ್‌ಪಿ ಮುರುಳೀಧರ್ ಹೇಳಿದರು. ಪೊಲೀಸ್ ಇಲಾಖೆಯಿಂದ ಪತ್ರಿಕಾಭವನದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಈ ಬಾರಿ ಸೋಮವಾರಪೇಟೆ, ನ.೪: ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ರದ್ದು ಪಡಿಸಿದ್ದು, ಸರ್ಕಾರದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಡಿವೈಎಸ್‌ಪಿ ಮುರುಳೀಧರ್ ಹೇಳಿದರು. ಪೊಲೀಸ್ ಇಲಾಖೆಯಿಂದ ಪತ್ರಿಕಾಭವನದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಈ ಬಾರಿ ಮೆರವಣಿಗೆ ನಡೆಸಲು ಮೊದಲೇ ಇಲಾಖೆಯಿಂದ ಅನುಮತಿ ಪಡೆಯಬೇಕೆಂದರು.

ಎಲ್ಲರೂ ಒಟ್ಟಾಗಿ ಸೇರಿ ಹಬ್ಬಗಳ ಆಚರಣೆ ಮಾಡಬೇಕಿದೆ. ಸಮಾಜದ ಶಾಂತಿ ಕದಡುವ ಕೆಲಸ ಮಾಡಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವದು ಎಂದು ಎಚ್ಚರಿಸಿದರು.

ವೇದಿಕೆಯಲ್ಲಿ ಪಿಎಸ್‌ಐ ಶಿವಶಂಕರ್, ಅಪರಾಧ ವಿಭಾಗದ ಪಿಎಸ್‌ಐ ಎಸ್.ಸಿ. ವಿರೂಪಾಕ್ಷ ಉಪಸ್ಥಿತರಿದ್ದರು. ಸಭೆಯಲ್ಲಿ ಠಾಣಾ ವ್ಯಾಪ್ತಿಯ ಎಲ್ಲ ಮಸೀದಿಗಳ ಪದಾಧಿಕಾರಿಗಳು, ಹಿಂದೂ ಸಂಘಟನೆಯ ಪದಾಧಿಕಾರಿಗಳು, ಜಯಕರ್ನಾಟಕ ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.