ಕೂಡಿಗೆ, ನ. ೪: ರಾಜ್ಯ ವೀರಶೈವ ಲಿಂಗಾಯತ ಯುವ ವೇದಿಕೆಯ ವತಿಯಿಂದ ನೆರೆಹಾವಳಿಯಿಂದ ಮನೆ ಕಳೆದುಕೊಂಡ ಕುಟುಂಬಕ್ಕೆ ಮನೆಯ ಹಸ್ತಾಂತರ ಮತ್ತು ಶ್ರೀ ಸದ್ಧಗಂಗಾ ನಿಲಯ ಉದ್ಘಾಟನೆ ತಾ. ೫ ರಂದು (ಇಂದು) ಸಂಜೆ ೪ ಗಂಟೆಗೆ ಕೂಡುಮಂಗಳೂರು ಗ್ರಾಮದಲ್ಲಿ ನಡೆಯಲಿದೆ. ಮನೆ ಹಸ್ತಾಂತರವನ್ನು ತುಮಕೂರು ಸಿದ್ಧಗಂಗಾ ಮಠದ ಪೀಠಾಧ್ಯಕ್ಷ ಸಿದ್ಧಗಂಗಾ ಮಹಾಸ್ವಾಮಿ ನೆರವೇರಿಸಲಿದ್ದಾರೆ. ಕಿರಿಕೊಡ್ಲಿ ಮಠದ ಸದಾಶಿವ ಮಹಾಸ್ವಾಮೀಜಿ, ಅರಮೇರಿ ಕಳಂಚೇರಿ ಶಾಂತ ಮಲ್ಲಿಕಾರ್ಜುನಸ್ವಾಮೀಜಿ, ಅಮ್ಮತ್ತಿ ಕನ್ನಡ ಮಠ ಚನ್ನಬಸವ ದೇಶಿಕೇಂದ್ರ ಸ್ವಾಮೀಜಿ, ವಿವಿಧ ಮಠಗಳ ಪ್ರಮುಖರು ಭಾಗವಹಿಸಲಿ ದ್ದಾರೆ. ಅಧ್ಯಕ್ಷತೆಯನ್ನು ವೀರಶೈವ ಲಿಂಗಾಯತ ವೇದಿಕೆಯ ರಾಜ್ಯಾಧ್ಯಕ್ಷ ಪ್ರಶಾಂತ್ ಕಲ್ಲೂರ್ ವಹಿಸಿಲಿದ್ದಾರೆ. ಉದ್ಘಾಟನೆಯನ್ನು ಸೋಮಶೇಖರ್ ಶಂಭುಲಿAಗಯ್ಯ ಕಲ್ಲೂರ್ ನೆರವೇರಿಸಲಿದ್ದಾರೆ. ಮನೆಯು ರೂ. ೮ ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿದೆ.