ಮಡಿಕೇರಿ, ನ. ೩: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡ ವಿವಿಧ ಜಾತಿ ಮತ್ತು ಧರ್ಮದ ಸುಮಾರು ೧೩ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡುವ ಮೂಲಕ ಜಮಾಅತೇ ಇಸ್ಲಾಮಿ ಹಿಂದ್ನ ಸಮಾಜ ಸೇವಾ ವಿಭಾಗವಾದ ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿಯ ಕೊಡಗು ಜಿಲ್ಲಾ ಘಟಕ ಇತರರಿಗೆ ಮಾದರಿಯಾಗಿದೆ. ಕೊಡಗು ರಿಲೀಫ್ ಸೆಲ್ ವತಿಯಿಂದ ಸುಮಾರು ೩೬ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ೧೩ ಮನೆಗಳನ್ನು ನ.೫ ರಂದು ಫಲಾನುಭವಿಗಳಿಗೆ ಹಸ್ತಾಂತರಿಸ ಲಾಗುವದು ಎಂದು ಜಮಾಅತೇ ಇಸ್ಲಾಮಿ ಹಿಂದ್ನ ಮಂಗಳೂರು ವಲಯ ಸಂಚಾಲಕ ಯು. ಅಬ್ದುಸ್ಸಲಾಂ ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾನಿಗಳ ನೆರವಿನಿಂದ ಮಡಿಕೇರಿ ನಗರದ ತ್ಯಾಗರಾಜ ನಗರದಲ್ಲಿ ಸುಮಾರು ೩೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ೮ ಮನೆಗಳನ್ನು ಹಾಗೂ ಸಿದ್ದಾಪುರದ ಎಂ.ಜಿ. ರಸ್ತೆಯಲ್ಲಿ ೬ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ೫ ಮನೆಗಳನ್ನು ಅಂದು ರಾಜ್ಯದ ವಸತಿ ಸಚಿವ ವಿ. ಸೋಮಣ್ಣ ಅವರು ಹಸ್ತಾಂತರಿಸಲಿದ್ದಾರೆ ಎಂದು ಹೇಳಿದರು.
ಜಮಾಅತೆ ಇಸ್ಲಾಮೀ ಹಿಂದ್ನ ಸಮಾಜಸೇವಾ ವಿಭಾಗವಾಗಿರುವ ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿ ಕಳೆದ ಒಂದು ದಶಕ ದಿಂದೀಚೆಗೆ ರಾಜ್ಯದ ೮ ವಲಯಗಳಲ್ಲಿ ಸಮಾಜಸೇವಾ ಕೆಲಸ ನಿರ್ವ ಹಿಸುತ್ತಾ ಬಂದಿದೆ. ೫೦ಕ್ಕೂ ಹೆಚ್ಚು ಗುಂಪುಗಳಲ್ಲಿ ೫೦೦ ಕ್ಕಿಂತಲೂ ಹೆಚ್ಚು ಕಾರ್ಯಕರ್ತರುಗಳನ್ನು ಹೊಂದಿದೆ. ಪ್ರಕೃತಿ ವಿಕೋಪದಂತಹ ತುರ್ತು ಸಂದರ್ಭಗಳಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗುವಂತಹ ಪರಿಣತಿ ಹೊಂದಿರುವ ಕಾರ್ಯಕರ್ತರನ್ನು ಸಂಘಟನೆಯು ಹೊಂದಿದ್ದು, ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಇಚ್ಛಿಸುವವರಿಗೆ ತರಬೇತಿಯನ್ನೂ ನೀಡುತ್ತಿದೆ ಎಂದು ತಿಳಿಸಿದರು.
ಈಗಾಗಲೇ ರಾಜ್ಯದಾದ್ಯಂತ ೧೦೦ ಕ್ಕಿಂತಲೂ ಹೆಚ್ಚು ತರಬೇತಿ ಶಿಬಿg Àಗಳನ್ನು ನಡೆಸ ಲಾಗಿದ್ದು, ನೆರೆಯ ರಾಜ್ಯಗಳಾದ ಕೇರಳ, ತಮಿಳುನಾಡು, ಮಹಾರಾಷ್ಟç, ಒರಿಸ್ಸಾ ರಾಜ್ಯಗಳ ಲ್ಲಿಯೂ ಸಂಘಟನೆ ಯ ಕಾರ್ಯ ಕರ್ತರು ಸಂದರ್ಭ ಕ್ಕನುಸಾರ ತಮ್ಮನ್ನು ಸೇವೆಯಲ್ಲಿ ತೊಡ ಗಿಸಿಕೊಂಡಿ ದ್ದಾರೆ. ಕಳೆದ ವರ್ಷ ಜಿಲ್ಲೆಯಲ್ಲಿ ಉಂಟಾದ ಪ್ರಾಕೃತಿಕ ವಿಕೋಪದ ಸಂದರ್ಭ ಕೊಡಗು ಜಿಲ್ಲೆಯ ಸಿದ್ದಾಪುರ ಹಾಗೂ ಮಡಿಕೇರಿಯಲ್ಲಿ ೮೦೦ಕ್ಕೂ ಅಧಿಕ ಕುಟುಂಬಗಳ ಸಮೀಕ್ಷೆ ನಡೆಸಿ, ಪರಿಹಾರ ಕೇಂದ್ರಗಳಿಗೆ ಹೊರತಾಗಿ ಕೆಲಸವಿಲ್ಲದೆ ಕಷ್ಟಪಡುತ್ತಿ ರುವ ಸುಮಾರು ೧೭೬೫ ಮಂದಿಗೆ ಆಹಾರ ಮತ್ತು ಇತರ ಸಾಮಾಗ್ರಿ ಗಳನ್ನೊಳಗೊಂಡ ಪರಿಕರಗಳನ್ನು ವಿತರಿಸಲಾಗಿದ್ದು, ಪ್ರವಾಹಕ್ಕೆ ತುತ್ತಾದ ೯೫ ಮನೆಗಳನ್ನು ಶುಚಿಗೊಳಿಸಲಾಗಿದೆ. ೪೫ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಿಟ್ಗಳನ್ನು ನೀಡಲಾಗಿದ್ದು, ೭ ಪರಿಹಾರ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ಆತ್ಮಸ್ಥೆöÊರ್ಯ ತುಂಬುವ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಅಲ್ಲದೆ ೬.೫ ಲಕ್ಷ ರೂ. ವೆಚ್ಚದಲ್ಲಿ ೬೫ ಮಂದಿಗೆ ತಾತ್ಕಾಲಿಕ ಶೆಡ್ಗಳನ್ನು ನಿರ್ಮಿಸಿಕೊಡಲಾಗಿದೆ. ವೈದ್ಯಕೀಯ ತಪಾಸಣಾ ಶಿಬಿರಗಳನ್ನು ನಡೆಸಿ ೯೦೦ ಮಂದಿಗೆ ಚಿಕಿತ್ಸೆ ನೀಡಲಾಗಿದ್ದು, ೮೦ಸಾವಿರ ರೂ.ಗಳ ಔಷಧಿಗಳನ್ನು ವಿತರಿಸಲಾಗಿದೆ ಎಂದು ವಿವರಿಸಿದರು.
ಸ್ವಾಗತ ಸಮಿತಿ ಸಂಚಾಲಕ ಎಸ್.ಐ. ಮುನೀರ್ ಅಹ್ಮದ್ ಮಾತನಾಡಿ, ತಾ. ೫ ರಂದು ಪೂರ್ವಾಹ್ನ ೧೧ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಸತಿ ಸಚಿವ ವಿ. ಸೋಮಣ್ಣ ಅವರು ಮನೆಗಳನ್ನು ಹಸ್ತಾಂತರಿಸಲಿದ್ದು, ಜಮಾಅತೇ ಇಸ್ಲಾಮಿ ಹಿಂದ್ನ ರಾಜ್ಯ ಉಪಾಧ್ಯಕ್ಷ ಮುಹಮ್ಮದ್ ಯೂಸುಫ್ ಕನ್ನಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮ ದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ, ಮಂಗಳೂರಿನ ಶಾಂತಿ ಪ್ರಕಾಶನ ಸಂಸ್ಥೆಯ ವ್ಯವಸ್ಥಾಪಕ ಮುಹಮ್ಮದ್ ಕುಂಞÂ, ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದರು.
ಅAದು ಸಂಜೆ ೪ ಗಂಟೆಗೆ ಸಿದ್ದಾಪುರದಲ್ಲಿ ೫ ಮಂದಿಗೆ ಮನೆಗಳನ್ನು ಹಸ್ತಾಂತರಿಸಲಾಗುವದು ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಪಿ.ಕೆ.ಅಬ್ದುಲ್ ರೆಹೆಮಾನ್, ಸಾರ್ವಜನಿಕ ಸಂಪರ್ಕ ವಿಭಾಗದ ಸಂಚಾಲಕ ಸಿ.ಹೆಚ್.ಅಫ್ಸರ್, ಸ್ಥಾನೀಯ ಅಧ್ಯಕ್ಷ ಜಿ.ಹೆಚ್. ಮುಹಮ್ಮದ್ ಹನೀಫ್ ಹಾಗೂ ತಣಲ್ ಆಶ್ರಯ ಕೇಂದ್ರದ ವ್ಯವಸ್ಥಾಪಕ ಮುಹಮ್ಮದ್ ಮುಸ್ತಫಾ ಉಪಸ್ಥಿತರಿದ್ದರು.