ಕುಶಾಲನಗರ, ನ. ೩: ಮಾನವರಲ್ಲಿ ತ್ಯಾಗ ಮತ್ತು ಸೌಹಾರ್ದ ಮನೋಭಾವನೆ ಸದಾ ನೆಲೆಸಿರಬೇಕೆಂದು ನಿವೃತ್ತ ಮುಖ್ಯ ಶಿಕ್ಷಕ ನಜೀರ್ ಅಹಮ್ಮದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಸಂಪಾದಕರ ಮತ್ತು ವರದಿಗಾರರ ಸಂಘ ಮತ್ತು ಕರ್ನಾಟಕ ಮಾನವ ಹಕ್ಕುಗಳ ಜನಜಾಗೃತಿ ವೇದಿಕೆ ಹಾಗೂ ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ಸಹಯೋಗದಲ್ಲಿ ಕುಶಾಲನಗರದ ಗಡಿಭಾಗದ ಕಾವೇರಿ ಪ್ರತಿಮೆ ಬಳಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಹ ಸಂದರ್ಭ ಸಹಾಯಹಸ್ತ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡ ಜನರನ್ನು ಗುರುತಿಸುವದು ಸಂಘಸAಸ್ಥೆಗಳ ಆದ್ಯ ಕರ್ತವ್ಯವಾಗಿದೆ ಎಂದರು.
ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಮಾನವ ಹಕ್ಕುಗಳ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಡಾ. ಅಶ್ವತ್, ನಗರದ ಭಾಸ್ಕರ್ ಉಪಸ್ಥಿತರಿದ್ದು ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಸಂಘಸAಸ್ಥೆಗಳ ೨೦ ಮಂದಿಗೆ “ಆಪತ್ಬಾಂಧವ “ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಹಿರಿಯ ವಕೀಲ ಎಚ್.ಎಸ್.ಚಂದ್ರಮೌಳಿ, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಪ್ರಮುಖ ಅಮೀನ್ ಮೊಹಿಸಿನ್, ಕರ್ನಾಟಕ ಸಂಪಾದಕರ ಮತ್ತು ವರದಿಗಾರರ ಸಂಘದ ಕೊಡಗು ಜಿಲ್ಲಾಧ್ಯಕ್ಷ ಹೆಚ್.ಎಂ.ರಘು, ಕರ್ನಾಟಕ ಮಾನವ ಹಕ್ಕುಗಳ ಜನಜಾಗೃತಿ ವೇದಿಕೆಯ ವ್ಯಾಪಾರಿ ಘಟಕದ ಅಧ್ಯಕ್ಷ ಎನ್.ಗುರುಸ್ವಾಮಿ, ಕಾರ್ಯಕ್ರಮ ಸಂಘಟಕ ಕೆ.ಟಿ.ಶ್ರೀನಿವಾಸ್, ಕೆ.ಬಿ.ರಾಜು ಮತ್ತಿತರರು ಇದ್ದರು.