ವೀರಾಜಪೇಟೆ, ನ.೫: ಜೀವನದಲ್ಲಿ ಜಿಗುಪ್ಸೆಗೊಂಡು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೊಳ್ಳುಮಾಡು ಗ್ರಾಮದಲ್ಲಿ ನಡೆದಿದೆ.

ಬೊಳ್ಳುಮಾಡು ಗ್ರಾಮ ನಿವಾಸಿ ಹೆಚ್. ಪೊನ್ನಣ್ಣ ಅವರ ಪುತ್ರಿ ಹೆಚ್.ಪಿ. ಭವಾನಿ (೧೯) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಬೊಳ್ಳುಮಾಡು ಗ್ರಾಮದ ನಿವಾಸಿ ಪಂದ್ಯAಡ ಪೂವಣ್ಣ (ಡಾಲು) ಅವರ ತೋಟದ ಲೈನ್ ಮನೆಯಲ್ಲಿ ವಾಸವಿರುವ ಪೋಷಕರು ಎಂದಿನAತೆ ಬೆಳಿಗ್ಗೆ ತೋಟದ ಕೆಲಸಕ್ಕೆಂದು ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವತಿಯ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. - ಕೆ.ಕೆ.ಎಸ್.