ಮಡಿಕೇರಿ, ನ.೫: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಅವರು ತಾ. ೬ ರಂದು (ಇಂದು) ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ ೯ ಗಂಟೆಗೆ ನೆಲ್ಲಿಹುದಿಕೇರಿ, ಬೆಟ್ಟದಕಾಡು, ಸಿದ್ದಾಪುರ, ಪೆರುಂಬಾಡಿ, ಮದೆ ಗ್ರಾಮಗಳಲ್ಲಿ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ ಎಂದು ಸಭಾಪತಿಯವರ ಆಪ್ತ ಕಾರ್ಯದರ್ಶಿ ಎಚ್.ಪಿ.ಹರೀಶ್ ತಿಳಿಸಿದ್ದಾರೆ.