ಮಡಿಕೇರಿ, ನ.೫: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಮಡಿಕೇರಿ ತಾಲೂಕು ತಹಶೀಲ್ದಾರವರ ಕಚೇರಿಯಲ್ಲಿ ತಾ. ೭ ರಂದು ಬೆಳಗ್ಗೆ ೧೧ ಗಂಟೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ಧ್ವಜಾ ದಿನಾಚರಣೆ ನಡೆಯಲಿದೆ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಬಿ.ಕಾಳಪ್ಪ ಅವರು ತಿಳಿಸಿದ್ದಾರೆ.