ಕೂಡಿಗೆ, ನ. 6: ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆಯು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ, ರೇಷ್ಮೆ ಇಲಾಖೆ, ಚೆಸ್ಕಾಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಇನ್ನಿತರ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ, ತಮ್ಮ ತಮ್ಮ ಇಲಾಖೆಗಳ ಕಾರ್ಯಕ್ರಮಗಳ ಬಗ್ಗೆ ಮತ್ತು ಸಾರ್ವಜನಿಕರಿಗೆ ಸಿಗುವ ಸೌಲಭ್ಯಗಳ ಬಗ್ಗೆ ತಿಳಿಸಿದರು. ನಂತರ ಸಭೆಯಲ್ಲಿದ್ದ ಶಾಲಾ ಮುಖ್ಯೋಪಾಧ್ಯಾ ಯರು ಶಾಲೆಗೆ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಾಗೂ ಅಂಗನವಾಡಿ ಕಾರ್ಯಕರ್ತೆ ಯರು ಅಂಗನವಾಡಿಗೆ ಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿ ಚರ್ಚೆ ನಡೆಸಿದರು. ಗ್ರಾಮ ಪಂಚಾಯತಿ ಸದಸ್ಯರಾದ ಮಂಜಯ್ಯ, ಹೆಚ್.ಎಸ್.ರವಿ, ಮೋಹಿನಿ, ಕಲ್ಪನಾ, ಚಂದ್ರಿಕಾ, ರತ್ನಮ್ಮ, ಪುಷ್ಪ, ಅಭಿವೃದ್ಧಿ ಅಧಿಕಾರಿ ಅಶ್ವಿನಿ, ಕಾರ್ಯದರ್ಶಿ ಶಿಲ್ಪ ಸೇರಿದಂತೆ ಗ್ರಾ.ಪಂ ವ್ಯಾಪ್ತಿಯ ವಿವಿಧ ಇಲಾಖೆಯವರು ಇದ್ದರು.