ಸೋಮವಾರಪೇಟೆ, ನ. 6: ಬೀಟಿಕಟ್ಟೆ ಹಾರಳ್ಳಿ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಸಂಘ, ಮಡಿಕೇರಿಯ ನೆಹರು ಯುವ ಕೇಂದ್ರದ ವತಿಯಿಂದ ಸ್ಥಳೀಯ ಅಂಬೇಡ್ಕರ್ ಭವನದಲ್ಲಿ ಭ್ರಷ್ಟಾಚಾರ ನಿರ್ಮೂಲನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಸಂಘದ ಮಾಜಿ ಅಧ್ಯಕ್ಷ ಟಿ.ಆರ್. ರಾಮಚಂದ್ರ ಮಾತನಾಡಿ, ನಾವು ಜೀವನದ ಪ್ರತಿಯೊಂದು ಕ್ಷೇತ್ರದಿಂದ ಭ್ರಷ್ಟಾಚಾರವನ್ನು ತೊಲಗಿಸಲು ಪ್ರಯತ್ನಪಡಬೇಕು ಎಂದು ಹೇಳಿದರು. ಸಂಘದ ಅಧ್ಯಕ್ಷ ಬಿ.ಎಸ್. ಕುಮಾರ್ ಹಾಗೂ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.