ಒಡೆಯನಪುರ, ನ. 7: ಸಮೀಪದ ಶನಿವಾರಸಂತೆ ಹೋಬಳಿ ಜಾನಪದ ಪರಿಷತ್ ಮತ್ತು ಸುಪ್ರಜ ಗುರುಕುಲ ವಿದ್ಯಾಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾ. 11 ರಂದು ಸಮೀಪದ ಶನಿವಾರಸಂತೆಯ ಸುಪ್ರಜ ಗುರುಕುಲ ಶಾಲೆಯಲ್ಲಿ ಕನ್ನಡ ಸಾಹಿತ್ಯ, ಸಂಸ್ಕøತಿ ನಾಡು-ನುಡಿಗೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಕನ್ನಡ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾನಪದ ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿಗಳು ಕನ್ನಡಾಭಿಮಾನ ಕನ್ನಡತನ ಬೆಳೆಸಿಕೊಳ್ಳಬೇಕೆಂಬ ಉದ್ದೇಶದಿಂದ ಈ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು, ತಾ. 11 ರಂದು ಬೆಳಿಗ್ಗೆ 10 ಗಂಟೆಗೆ ಸ್ಪರ್ಧೆ ಪ್ರಾರಂಭ ಗೊಳ್ಳುಲಿದೆ. ವಿಜೇತರಿಗೆ ತಾ. 14 ರಂದು ಸುಪ್ರಜ ಗುರುಕುಲ ಶಾಲೆಯಲ್ಲಿ ನಡೆಯಲಿರುವ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಶಾಲೆ ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸುಜಲಾದೇವಿ (ಮೊ. 9141692556 ಹಾಗೂ ವಿ.ಸಿ. ಸುರೇಶ್ ಮೊ. 9742556321) ಇವರನ್ನು ಸಂಪರ್ಕಿಸಬಹುದು.