ಮಡಿಕೇರಿ, ನ.೬: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ವಿವಿಧ ಧಾರ್ಮಿಕ ಮುಖಂಡರು ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಅವರ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಮುಖಂಡರ ಜತೆ ಸಭೆ ನಡೆಯಿತು.
ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ತಾ. ೧೦ ರಂದು ಟಿಪ್ಪು ಜಯಂತಿ ಆಚರಣೆ ಇರುವದಿಲ್ಲ, ಅದೇ ದಿನ ಈದ್ ಮಿಲಾದ್ ಹಬ್ಬವಿದೆ. ಅಯೋಧ್ಯ ತೀರ್ಪು ಇದೇ ತಿಂಗಳ ೧೭ ರೊಳಗೆ ಪ್ರಕಟವಾಗಬಹುದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿವಿಧ ಧಾರ್ಮಿಕ ಮುಖಂಡರ ಸಹಕಾರ ಅತ್ಯಗತ್ಯವಾಗಿದೆ ಎಂದು ಮನವಿ ಮಾಡಿದರು.
ಬಳಿಕ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಎ.ಯಾಕುಬ್ ಮಾತನಾಡಿ ಟಿಪ್ಪು ಜಯಂತಿಯನ್ನು ಕಳೆದ ಮೂರು ವರ್ಷಗಳಿಂದ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿತ್ತು, ಈ ಬಾರಿ ಸರ್ಕಾರ ಹಿಂದೆ ಸರಿದಿರುವದರಿಂದ ಟಿಪ್ಪು ಜಯಂತಿ ಆಚರಣೆ ಮಾಡುತ್ತಿಲ್ಲ, ಈದ್ ಮಿಲಾದ್ ಹಬ್ಬವನ್ನು ಮಸೀದಿಯಲ್ಲಿ ಆಚರಿಸಲಾಗುತ್ತದೆ. ಆದರೆ ಸಂಘಟನೆಗಳಿAದ ನಡೆಯುವದಿಲ್ಲ, ಇನ್ನೂ ಬಾಬರಿ ಮಸೀದಿ ವಿಚಾರಕ್ಕೆ ಸಂಬAಧಿಸಿದAತೆ ರಾಷ್ಟçದ ಕಾನೂನನ್ನು ಗೌರವಿಸುತ್ತೇವೆ. ಸಂವಿಧಾನ ಬದ್ಧವಾಗಿ ನಡೆದುಕೊಳ್ಳುತ್ತೇವೆ ಎಂದರು.
ಕೊಂಡAಗೇರಿ ಮುಸ್ಲಿಂ ಜಮಾಯತ್ ಸಮಿತಿ ಕಾರ್ಯದರ್ಶಿ ಯೂಸಫ್ ಮಾತನಾಡಿ ೧೪೦೦ ವರ್ಷಗಳಿಂದ ಈದ್ ಮಿಲಾದ್ ಹಬ್ಬವನ್ನು ಮುಸಲ್ಮಾನ ಬಾಂಧವರು, ಜಮಾಯತ್ ನವರು ವಿಜೃಂಭಣೆಯಿAದ, ಶಾಂತಿಯುತವಾಗಿ ಆಚರಿಸುತ್ತಿದ್ದೇವೆ ಎಂದು ಹೇಳಿದರು.
ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಬಿನ್ ದೇವಯ್ಯ ಮಾತನಾಡಿ ಈದ್ ಮಿಲಾದ್ ಹಬ್ಬ ಆಚರಣೆ ಸಂಬAಧ ಇದುವರೆಗೆ ಶಾಂತಿ ಸಭೆ ನಡೆಸಿಲ್ಲ, ಇದರ ಅಗತ್ಯತೆಯೂ ಇಲ್ಲ, ಆದರೆ ಕಳೆದ ೨೦೧೬ ರಲ್ಲಿ ಟಿಪ್ಪು ಜಯಂತಿ ಆಚರಣೆಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಕಲಹ ಉಂಟಾಗಿತ್ತು, ಸರ್ಕಾರ ಈ ಬಾರಿ ಟಿಪ್ಪು ಜಯಂತಿ ಆಚರಣೆ ಇಲ್ಲವೆಂದು ಆದೇಶ ಹೊರಡಿಸಿದೆ. ಹಾಗೆಯೇ ಅಯೋಧ್ಯ ವಿಚಾರ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಪಾಲಿಸಲಾಗುವದು ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಹ್ಯಾರೀಸ್ ಅವರು ಮಾತನಾಡಿ ಟಿಪ್ಪು ಜಯಂತಿ ಆಚರಣೆ ಸಂಬAಧಿಸಿದAತೆ ಸರ್ಕಾರದ ಆದೇಶ ಪಾಲಿಸುವದು ಪ್ರತಿಯೊಬ್ಬರ ಕರ್ತವ್ಯ, ಈದ್ ಮಿಲಾದ್ ಹಬ್ಬವನ್ನು ಶಾಂತಿಯುತ ವಾಗಿ ಆಚರಿಸುತ್ತೇವೆ. ಅಯೋಧ್ಯ ಸಂಬAಧ ನ್ಯಾಯಾಲಯದ ತೀರ್ಪು ಗೌರವಿಸುತ್ತೇವೆ ಎಂದರು. ಭಾಗಮಂಡಲ ವ್ಯಾಪ್ತಿಯಲ್ಲಿ ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಮೈಕ್ ಬಳಕೆಗೆ ಅವಕಾಶ ನೀಡಲಾಗಿದೆ. ಆದರೆ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಹ್ಯಾರಿಸ್ ಮನವಿ ಮಾಡಿದರು. ಪಿಎಫ್ಐ ಜಿಲ್ಲಾಧ್ಯಕ್ಷ ಹ್ಯಾರೀಸ್ ಅವರು ಅಯೋಧ್ಯ ವಿಚಾರ ನ್ಯಾಯಾಲಯದ ತೀರ್ಪು ಗೌರವಿಸಲಾಗುವದು ಎಂದರು.
ವಿವಿಧ ಧಾರ್ಮಿಕ ಮುಖಂಡರ ಅಭಿಪ್ರಾಯ ಪಡೆದ ಬಳಿಕ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಪಿ.ಸುಮನ್ ಅವರು ಟಿಪ್ಪು ಜಯಂತಿಯನ್ನು ಖಾಸಗಿ ಆಚರಿಸುವಂತಿಲ್ಲ ಎಂದು ಹೇಳಿದರು. ವಿವಿಧ ಧಾರ್ಮಿಕ ವಿಚಾರಗಳಿಗೆ ಸಂಬAಧಿಸಿದAತೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಅಂಶಗಳು ಹರಿದಾಡುವದು ತಿಳಿದುಬಂದಲ್ಲಿ ಗಂಭೀರವಾಗಿ ಪರಿಗಣಿಸಲಾಗುವದು. ಹಬ್ಬಗಳನ್ನು ಶಾಂತಿಯುವಾಗಿ ಆಚರಿಸಬೇಕು ಎಂದು ಮನವಿ ಮಾಡಿದರು. ಅಯೋಧ್ಯ ತೀರ್ಪು ಸಂದರ್ಭದಲ್ಲಿ ವಿಜಯೋತ್ಸವಕ್ಕೆ ಅವಕಾಶವಿಲ್ಲ, ಯಾವದೇ ಗೊಂದಲಗಳಿಗೆ ಅವಕಾಶ ನೀಡದೆ, ಶಾಂತಿ ಸುವ್ಯವಸ್ಥೆಗೆ ಸಹಕರಿಸುವಂತೆ ಕೋರಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಜಿಲ್ಲಾಡಳಿತ ಜೊತೆ ಎಲ್ಲಾ ಧಾರ್ಮಿಕ ಸಮಾಜಗಳು ಸಹಕಾರ ನೀಡಿದ್ದೀರಿ, ಅದೇ ಸಹಕಾರವನ್ನು ಮುಂದುವರೆಸಬೇಕು. ಧಾರ್ಮಿಕ ಮುಖಂಡರು ಸಭೆಯ ಭರವಸೆಯನ್ನು ಎಲ್ಲಾ ಕಡೆ ತಿಳಿಸಬೇಕು ಎಂದು ಮನವಿ ಮಾಡಿದರು.
ಈ ಬಾರಿ ಟಿಪ್ಪು ಜಯಂತಿ ಇರುವುದಿಲ್ಲ, ಖಾಸಗಿ ಕಾರ್ಯಕ್ರಮಕ್ಕೂ ಅವಕಾಶವಿಲ್ಲ, ಸರ್ಕಾರದ ಆದೇಶವನ್ನು ಪಾಲಿಸಬೇಕು. ಅಯೋಧ್ಯ ತೀರ್ಪು ಸಂಬAಧ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಬೇಕು. ಇನ್ನೊಬ್ಬರಿಗೆ ನೋವು ಉಂಟು ಮಾಡಬಾರದು. ನಿಯಮಗಳನ್ನು ಅನುಸರಿಸಬೇಕು. ಸಾಮಾಜಿಕ ಜಾಲತಾಣಗಳ ಮಾಹಿತಿಗಳನ್ನು ಫಾರ್ವರ್ಡ್ ಮಾಡಬಾರದು, ಜಿಲ್ಲೆಯಲ್ಲಿ ಶಾಂತಿಯಿAದ ಹಬ್ಬ ಆಚರಿಸಬೇಕು. ಗೊಂದಲ ನಿರ್ಮಾಣ ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವದು ಎಂದು ಎಚ್ಚರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಡಿವೈಎಸ್ಪಿಗಳಾದ ದನೇಶ್ ಕುಮಾರ್, ಮುರಳಿಧರ, ಜಯಕುಮಾರ್, ವಿವಿಧ ಧಾರ್ಮಿಕ ಮುಖಂಡರು, ನಾನಾ ಇಲಾಖೆ ಅಧಿಕಾರಿಗಳು ಇತರರು ಇದ್ದರು.