ವೀರಾಜಪೇಟೆ, ನ. 6 : ಉಚಿತ ಸೈಕಲ್ ವಿತರಣೆ ಯೋಜನೆಯಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿ ಗಳಿಗೆ ಉಪಯೋಗವಾಗುತ್ತಿದೆ. ಬಡ ವಿದ್ಯಾರ್ಥಿಗಳಿಗೆ ಸರಕಾರದಿಂದ ಬಿಡುಗಡೆಯಾದ ಸೈಕಲ್ ವಿತರಣೆ ಮಾಡಿ ಮಾತನಾಡಿದ ಅವರು ಸರಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಗಳ ವಿದ್ಯಾಭ್ಯಾಸದ ಹಿತದೃಷ್ಟಿ ಯಿಂದ ಉಚಿತ ಸೈಕಲ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳು ತ್ತಿದೆ. ವಿದ್ಯಾರ್ಥಿಗಳು ಸರಕಾರದ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳ ಬೇಕು ಎಂದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಿ. ಮುಸ್ತಫಾ ಮಾತನಾಡಿ, ಪೆÇೀಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಹಲೀಮಾ ಮಾತನಾಡಿ ಸರಕಾರ ಶಿಕ್ಷಣದ ಪ್ರಗತಿಗಾಗಿ ಸೈಕಲ್ ವಿತರಣೆ ಕ್ಷೀರ ಭಾಗ್ಯ, ಮಧ್ಯಾಹ್ನದ ಬಿಸಿಯೂಟ, ಉಚಿತ ಸಮವಸ್ತ್ರ ವಿತರಣೆ, ಪುಸ್ತಕ ವಿತರಣೆ ಮುಂತಾದ ಕಾರ್ಯಕ್ರಮ ಗಳನ್ನು ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹಾಗೂ ಪೆÇೀಷಕರು ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭ ಗ್ರಾಮ ಪಂಚಾಯ್ತಿ ಸದಸ್ಯ ಎಂ.ಕೆ.ಹನೀಫಾ, ಚಿಲ್ಲವಂಡ ಕಾವೇರಪ್ಪ, ಐನಂಡ ಪ್ರತಾಪ್, ಐನಂಡ ಗಣಪತಿ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್, ಆಶಾ ಕಾರ್ಯಕರ್ತೆ ದೇವಕಿ ಹಾಜರಿದ್ದರು. ಮುಖ್ಯ ಶಿಕ್ಷಕಿ ಕೆ.ಆರ್.ಬಿಂದು ಸ್ವಾಗತಿಸಿ, ಲೀಲಾವತಿ ವಂದಿಸಿದರು.