ಮಡಿಕೇರಿ, ನ. ೬: ಭಾಗಮಂಡಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಾಗೂ ನಬಾರ್ಡ್ ಸಹಾಯಧನ ಯೋಜನೆಯಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮೀಣ ಮಾರುಕಟ್ಟೆ ಮಾರಾಟ ಮಳಿಗೆಯ ಉದ್ಘಾಟನಾ ಸಮಾರಂಭ ಮತ್ತು ಸಭಾ ಕಾರ್ಯಕ್ರಮ ತಾ. ೭ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಠೆಗೆ ಸಂಘದ ನೂತನ ಕಟ್ಟಡದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾಗಮಂಡಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೊಸೂರು ಜೆ. ಸತೀಶ್ ಕುಮಾರ್ ವಹಿಸಲಿದ್ದಾರೆ. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ. ಬಾಂಡ್ ಗಣಪತಿ ಧ್ವಜಾರೋಹಣ ಮಾಡಲಿದ್ದಾರೆ.
ಕಟ್ಟಡದ ಉದ್ಘಾಟನೆಯನ್ನು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ನೆರವೇರಿಸಲಿದ್ದಾರೆ. ಬೆಂಗಳೂರು ಸಿ.ಜಿ.ಎಂ. ನಬಾರ್ಡ್ ಪಿ.ವಿ.ಎಸ್. ಸೂರ್ಯಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ಜಿಲ್ಲೆ ನಬಾರ್ಡ್ ಡಿ.ಡಿ.ಎಂ. ಪಿ.ವಿ. ಶ್ರೀನಿವಾಸ್, ನಿವೃತ್ತ ನಬಾರ್ಡ್ ಡಿಡಿಎಂ ಯಂ.ಸಿ. ನಾಣಯ್ಯ, ಮಡಿಕೇರಿ ಸಹಕಾರ ಸಂಘಗಳ ಸಹಾಯಕ ನಿಬಂಧಕ ಹೆಚ್.ಡಿ. ರವಿಕುಮಾರ್, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷೆ ಸುಮಿತ್ರಾ ಜೆ., ಕುಂದಚೇರಿ ಗ್ರಾ.ಪಂ. ಅಧ್ಯಕ್ಷ ಪಾಣತ್ತಲೆ ಎಂ. ಜಯಪ್ರಕಾಶ್, ಅಯ್ಯಂಗೇರಿ ಗ್ರಾ.ಪಂ. ಅಧ್ಯಕ್ಷೆ ಟಿ.ಎನ್. ಇಂದಿರಾ ನಾಗೇಶ್ ಭಾಗವಹಿಸಲಿದ್ದಾರೆ.