ಮಡಿಕೇರಿ, ನ. 7: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ತಾ. 2 ಮತ್ತು 3 ರಂದು ಮೈಸೂರಿನ ಜಯಚಾಮರಾಜೇಂದ್ರ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆದ ರಾಜ್ಯ ಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಕೊಡಗು ಜಿಲ್ಲೆಯ ಗೈಡ್ಸ್ ವಿಭಾಗದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳು ಪ್ರಥಮ, ಕಬ್ ವಿಭಾಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡಗದಾಳು ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.