ಮಡಿಕೇರಿ, ನ. ೬ : ಪ್ರಸಕ್ತ (೨೦೧೯-೨೦) ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವು ತಾ. ೮ ರಂದು ನಗರದ ಸಂತ ಮೈಕಲರ ಪ್ರೌಢ ಶಾಲೆಯಲ್ಲಿ ನಡೆಯಲಿದೆ. ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳು ಅಂದು ಬೆಳಿಗ್ಗೆ ೯.೩೦ ಗಂಟೆಗೆ ಭಾಗವಹಿಸಲು ತಿಳಿಸಿದೆ. ಈ ಬಗ್ಗೆ ಮುಖ್ಯ ಶಿಕ್ಷಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಕ್ತ ಕ್ರಮವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಚ್ಚಾಡೋ ತಿಳಿಸಿದ್ದಾರೆ.