ವೀರಾಜಪೇಟೆ, ನ. 7: ವೀರಾಜಪೇಟೆಯ ಗೋಣಿಕೊಪ್ಪ ರಸ್ತೆಯ ಮಾಂಸ ಮಾರುಕಟ್ಟೆ ಬಳಿಯಲ್ಲಿ ಹೊಸದಾಗಿ ಕಾಂಕ್ರಿಟ್ ಮೋರಿ ನಿರ್ಮಾಣಕ್ಕೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬೋಪಯ್ಯ ಪ್ರತಿ ವರ್ಷದ ಮಳೆಗಾಲದಲ್ಲಿ ಈ ಮೋರಿಯಿಂದ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿತ್ತು. ಮಳೆಗಾಲದಲ್ಲಿ ವಿವಿಧೆಡೆಗಳಿಂದ ಹರಿದು ಬರುವ ನೀರು ಶೇಖರಣೆಗೊಂಡು ಕಿರಿದಾದ ಮೋರಿಯಲ್ಲಿ ಸರಾಗವಾಗಿ ಹರಿಯದುದರಿಂದ ಇದಕ್ಕಾಗಿ ರೂ. 32 ಲಕ್ಷದ ವೆಚ್ಚದಲ್ಲಿ ಕಾಂಕ್ರಿಟ್ ಸೇತುವೆಯನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ತಕ್ಷಣದಿಂದ ಕಾಮಗಾರಿ ಆರಂಭವಾಗಲಿದೆ ಎಂದರು.

ಲೋಕೋಪಯೋಗಿ ಇಲಾಖೆಯ ಅಧಿಕಾರಿ ಎಂ. ಸುರೇಶ್, ಯತೀಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್. ಪಟ್ರಪಂಡ ರಘುನಾಣಯ್ಯ, ಪಟ್ಟಣ ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.