ನಾಪೋಕ್ಲು, ನ. 7: ನಾಪೋಕ್ಲುವಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರುಗಳ ಕೊರತೆ ಇದ್ದು ರೋಗಿಗಳಿಗೆ ಸಮಸ್ಯೆ ಉಂಟಾಗಿದೆ. ಹಲವಾರು ವರ್ಷಗಳಿಂದ ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸಲು ವೈದ್ಯರೇ ಇಲ್ಲದೆ ಸಂಕಷ್ಟ ಅನುಭವಿಸುವಂತಾಗಿದೆ. ನಾಪೋಕ್ಲು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಬೇಸತ್ತು ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವದೇ ಪ್ರಯೋಜನವಾಗಿಲ್ಲ. ತಾ. 9 ರಂದು ಬೆಳಿಗ್ಗೆ 10.30 ಗಂಟೆಯಿಂದ 11.30 ಗಂಟೆವರೆಗೆ ವೈದ್ಯರ ನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವದು ಎಂದು ವಾಹನ ಚಾಲಕರ ಸಂಘದ ಅಧ್ಯಕ್ಷ ಎಂ.ಇ. ರಜಾಕ್ ಕಾರ್ಯದರ್ಶಿ ಕೆ.ಎಂ. ಜಕ್ರಿಯ, ಕೆ.ಎ. ಹ್ಯಾರಿಸ್, ಮತ್ತಿತರರು ತಿಳಿಸಿದ್ದಾರೆ.