ಕೂಡಿಗೆ, ನ. 6: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕೂಡಿಗೆಯ ಜಮ್ಮಾ ಮಸೀದಿಯ ಆವರಣದಲ್ಲಿ ಮತ್ತು ನಂಜರಾಯಪಟ್ಟಣ ಮಸೀದಿಯ ಸಭಾಂಗಣದಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿ ನಂದೀಶ್ ಅವರ ಅಧ್ಯಕ್ಷತೆಯಲ್ಲಿ ಶಾಂತಿ ಸೌಹಾರ್ದ ಸಭೆ ನಡೆಯಿತು.

ಈದ್ ಮಿಲಾದ್ ಹಬ್ಬ ಆಚರಣೆಯ ಸಂದರ್ಭ ಯಾವದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮವಾಗಿ ಮಸೀದಿಯ ಪ್ರಮುಖರು ಹಾಗೂ ಗ್ರಾಮದ ಪ್ರಮುಖರು, ವಿವಿಧ ಸಂಘ ಸಂಸ್ಥೆಯ ಸಮ್ಮುಖದಲ್ಲಿ ಸಭೆಯನ್ನು ನಡೆಸಿ, ಧಾರ್ಮಿಕ ಸಂದೇಶ ಸಾರುವ ನಿಟ್ಟಿನಲ್ಲಿ ಪರಸ್ಪರ ಪ್ರೀತಿ ವಿಶ್ವಾಸದೊಂದಿಗೆ ಹಬ್ಬವನ್ನು ಅರ್ಥಪೂರ್ಣವಾಗಿ ಹಾಗೂ ಶಾಂತಿ ಯುತವಾಗಿ ಆಚರಣೆ ಮಾಡಬೇಕು ಎಂದು ನಂದೀಶ್ ತಿಳಿಸಿದರು. ಸಭೆ ಯಲ್ಲಿ ಕೂಡಿಗೆ ಮತ್ತು ನಂಜರಾಯ ಪಟ್ಟಣ ಮಸೀದಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಮತ್ತು ಗ್ರಾಮಸ್ಥರು ಇದ್ದರು.