ಮಡಿಕೇರಿ, ನ. 7: ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿಗಳಾದ ಭವನ್ ಕೆ.ಜೆ. ಅಯ್ಯಣ್ಣ ಎಂ.ಪಿ. ಹಾಗೂ ಪ್ರಜ್ವಲ್ ಬಿ. ಎಸ್. ಇವರುಗಳು 2019-20 ನೇ ಸಾಲಿನ ಬೆಂಗಳೂರು ವಿಶ್ವವಿದ್ಯಾನಿಲಯ ಆಯೋಜಿಸಿದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾನಿಲಯ ಹಾಕಿ ಪಂದ್ಯಾವಳಿಗೆ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪಟ್ಟಡ ಪೂವಣ್ಣ ತಿಳಿಸಿದ್ದಾರೆ. ಈ ವಿದ್ಯಾರ್ಥಿಗಳು ಮೂರ್ನಾಡು ಪದವಿ ಕಾಲೇಜಿನ ದೈಹಿಕ ಶಿಕ್ಷಕÀ ಕಂಬೀರಂಡ ಬೋಪಣ್ಣ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದಾರೆ.