ಮಡಿಕೇರಿ, ನ. 8: ಗ್ರೀನ್ ಸಿಟಿ ಫೋರಂ ನೂತನ ಅಧ್ಯಕ್ಷರಾಗಿ ಪಿ.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿಯಾಗಿ ಮಾದೇಟಿರ ತಿಮ್ಮಯ್ಯ ಹಾಗೂ ಖಜಾಂಚಿಯಾಗಿ ಮೋಂತಿ ಗಣೇಶ್ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಅಧ್ಯಕ್ಷತೆಯಲ್ಲಿ ಫೋರ್ಟ್ ಮರ್ಕರಾ ಹೊಟೇಲ್ ಸಭಾಂಗಣದಲ್ಲಿ ನಡೆದ ಫೋರಂ ವಾರ್ಷಿಕ ಮಹಾಸಭೆಯಲ್ಲಿ 2019-20ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ನಿರ್ದೇಶಕರಾಗಿ ಕುಕ್ಕೇರ ಜಯ ಚಿಣ್ಣಪ್ಪ, ಚೈಯ್ಯಂಡ ಸತ್ಯ ಗಣಪತಿ, ಅಂಬೆಕಲ್ ನವೀನ್ ಕುಶಾಲಪ್ಪ, ಕಿರಿಯಮಾಡ ರತನ್ ತಮ್ಮಯ್ಯ, ಸವಿತಾ ಭಟ್, ಕನ್ನಂಡ ಕವಿತಾ ಬೊಳ್ಳಪ್ಪ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಪೂಳಕಂಡ ರಾಜೇಶ್, ವ್ಯಾಂಡಮ್ ದಾಮೋದರ್, ಕಲ್ಲುಮಾಡಂಡ ಶಶಿ ಮೊಣ್ಣಪ್ಪ, ಪ್ರಜ್ಞಾ ರಾಜೇಂದ್ರ, ಅಗಸ್ತ್ಯ ಮಧುಕರ್ ಆಯ್ಕೆಯಾಗಿದ್ದಾರೆ.
ವಿವಿಧ ಸಂಘ, ಸಂಸ್ಥೆಗಳು, ಸಾರ್ವಜನಿಕರು, ಜಿಲ್ಲಾಡಳಿತ, ಪೊಲೀಸ್
(ಮೊದಲ ಪುಟದಿಂದ) ಇಲಾಖೆ ಸಹಕಾರದಿಂದ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಗಿದೆ ಎಂದು ನಿರ್ಗಮಿತ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಹೇಳಿದರು. ಸರ್ವರ ಸಹಕಾರದೊಂದಿಗೆ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲು ತಮ್ಮ ಅವಧಿಯಲ್ಲಿ ಗಮನ ಹರಿಸಲಾಗುವದೆಂದು ನೂತನ ಅಧ್ಯಕ್ಷ ಪಿ.ಕೃಷ್ಣಮೂರ್ತಿ ಹೇಳಿದರು.
ಹಸಿರು ಪಡೆ ಉದ್ಘಾಟನೆ : ತಾ. 9ರಂದು (ಇಂದು) ಮಧ್ಯಾಹ್ನ 12 ಗಂಟೆಗೆ ಮಡಿಕೇರಿ ಸಂತ ಜೋಸೆಫರ ವಿದ್ಯಾಸಂಸ್ಥೆಯಲ್ಲಿ ಹಸಿರು ಪಡೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಗ್ರೀನ್ ಸಿಟಿ ಫೋರಂ ಅಧ್ಯಕ್ಷ ಪಿ.ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಅಂತಾರಾಷ್ಟ್ರೀಯ ಕ್ರೀಡಾಪಟು ತೀತಮಾಡ ಅರ್ಜುನ್ ದೇವಯ್ಯ ಪಾಲ್ಗೊಳ್ಳಲಿದ್ದಾರೆಂದು ಪ್ರಧಾನ ಕಾರ್ಯದರ್ಶಿ ಮಾದೇಟಿರ ತಿಮ್ಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.