ಮಡಿಕೇರಿ, ನ. 8: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ರಾಜ್ಯದ ಪ್ರೌಢಶಾಲೆಗಳ 9ನೇ ತರಗತಿ ವಿದ್ಯಾರ್ಥಿಗಳಿಗಾಗಿ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ “ವಿಜ್ಞಾನ - ಗಣಿತ ಒಲಂಪಿಯಾಡ್ ಸ್ಪರ್ಧೆ”ಯನ್ನು ಆಯೋಜಿಸಲಾಗಿದ್ದು, ಕೊಡಗು ಜಿಲ್ಲೆಯ ಪೆÇನ್ನಂಪೇಟೆಯಲ್ಲಿ ನಡೆದ ಜಿಲ್ಲಾ ಮಟ್ಟದ “ವಿಜ್ಞಾನ - ಗಣಿತ ಒಲಂಪಿಯಾಡ್ ಸ್ಪರ್ಧೆ”ಯಲ್ಲಿ ಅಮ್ಮತ್ತಿ ಗುಡ್ ಶಫರ್ಡ್ ಸಂಯುಕ್ತ ಪದವಿಪೂರ್ವ ಕಾಲೇಜಿನ 9ನೇ ತರಗತಿಯ ಕುಮಾರಿ ಡೋನಾ ಮಿಶೆಲ್ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಗಳಿಸಿದ್ದಾಳೆ. ಈಕೆ ಬಿಜಾಪುರ ಜಿಲ್ಲೆಯಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲೂ ಭಾಗವಹಿಸಿ ಅಭಿನಂದನಾ ಪತ್ರವನ್ನು ಪಡೆದುಕೊಂಡಿದ್ದಾಳೆ. ಈಕೆ ಆನಂದಪುರ ದ ಎಗ್‍ಬರ್ಟ್ ಜಯಕುಮಾರ್-ಮೇರಿ ಜಯಕುಮಾರ್ ದಂಪತಿಗಳ ಪುತ್ರಿ.