ಕೂಡಿಗೆ: ಇಲ್ಲಿನ ಸೈನಿಕ ಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು. ಸರದಾರ್ ವಲ್ಲಭ ಬಾಯಿ ಪಟೇಲ್ ಅವರ ಜನ್ಮದಿನದಂದು ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಐಕ್ಯತಾ ಓಟ ನಡೆದ ನಂತರ 12ನೇ ತರಗತಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ ಮಾಡಲಾಯಿತು. ಶಾಲೆಯ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಗೋಣಿಕೊಪ್ಪಲು: ಇತ್ತೀಚೆಗೆ ಕಾವೇರಿ ಕಾಲೇಜು, ಗೋಣಿಕೊಪ್ಪಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಉಕ್ಕಿನ ಮನುಷ್ಯ ಸರದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸ್ ಅನ್ನು ಆಚರಿಸಲಾಯಿತು. ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಭಾರತವು ಬಹುಸಂಸ್ಕøತಿಯುಳ್ಳ ದೇಶವಾಗಿದ್ದು, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಏಕೈಕ ದೇಶವಾಗಿದೆ. ಇಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್, ಜೈನ ಮುಂತಾದ ಧರ್ಮೀಯರು ನಾವೆಲ್ಲ ಒಂದೇ ಎನ್ನುವ ಐಕ್ಯಮಂತ್ರದಿಂದ ಬದುಕುತ್ತಿದ್ದಾರೆ. ವಿದ್ಯಾರ್ಥಿಗಳಾದ ನೀವುಗಳು ಯಾವದೇ ಜಾತಿ-ಧರ್ಮ-ಭಾಷೆಗಳ ಬೇಧ-ಭಾವವನ್ನು ತೊರೆದು ದೇಶದ ಐಕ್ಯತೆಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನ ಸಂಚಾಲಕಿ ಡಾ. ರೇಖಾ ಚಿಣ್ಣಪ್ಪ ಕೆ. ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಐಕ್ಯತಾ ಭಾವನೆಯನ್ನು ಮೂಡಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ತಿರುಮಲಯ್ಯ ಎಸ್.ಆರ್. ಕಾರ್ಯಕ್ರಮ ಸಂಘಟಿಸಿದ್ದರು.ಮಡಿಕೇರಿ: ನೆಹರು ಯುವ ಕೇಂದ್ರ ಕಚೇರಿಯಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನಾಚರಣೆಯನ್ನು ಪುಷ್ಪ ಸಮರ್ಪಣೆ ಮಾಡುವ ಮೂಲಕ ಆಚರಿಸಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ನಂತರ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಏಕತಾ ದಿನಾಚರಣೆ ಆಚರಿಸಲಾಯಿತು. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಬಗ್ಗೆ ರಾಷ್ಟ್ರೀಯ ಸೇವಾ ಯೋಜನೆಯ ಸಹ ಅಧಿಕಾರಿ ಸಚಿನ್ ಮಾತನಾಡಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಗೀತಾಂಜಲಿ ಪ್ರತಿಜ್ಞಾವಿಧಿ ಬೋಧಿಸಿದರು.