ವೀರಾಜಪೇಟೆ, ನ. 8: ವೀರಾಜಪೇಟೆ ನಗರದ ಮಗ್ಗುಲ ಜಂಕ್ಷನ್ ಬಳಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ವೀರಾಜಪೇಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಿಗಳನ್ನು ಅಮ್ಮತ್ತಿ ಹೊಸೂರು (ಮೊದಲ ಪುಟದಿಂದ) ನಿವಾಸಿಗಳಾದ ವಿಜಯ ಮತ್ತು ಬಿದ್ದಪ್ಪ ಎಂದು ಗುರುತಿಸಲಾಗಿದ್ದು, ಆರೋಪಿಗಳಿಂದ 1 ಕೆ.ಜಿ. 149 ಗ್ರಾಂ ತೂಕದ ಗಾಂಜಾ ಮತ್ತು ಸಾಗಿಸಲು ಬಳಸಿದ ಸ್ಕೂಟರ್ನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿಗಳು ವೀರಾಜಪೇಟೆ ಪಟ್ಟಣದಲ್ಲಿ ಕೆಲವು ಗಲ್ಲಿಗಳಲ್ಲಿ ಗಾಂಜಾ ಇಟ್ಟುಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ವರ್ತಮಾನ ದೊರಕಿದ ಮೇರೆ ಪೋಲಿಸರು ಕ್ಷಿಪ್ರಗತಿಯಲ್ಲಿ ಕಾರ್ಯಾಚರಣೆ ಮಾಡಿ ಸಾಗಾಟ ಮಾಡುತ್ತಿದ್ದ ಸಂದರ್ಭ ಮಾಲು ಸಮೇತ ಬಂಧಿಸಿದ್ದಾರೆ.ಕೊಡಗು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್ ಮಾರ್ಗದರ್ಶನದಲ್ಲಿ ವೀರಾಜಪೇಟೆ ಡಿ.ವೈ.ಎಸ್.ಪಿ. ಜಯಕುಮಾರ್ ನಿರ್ದೆಶನದ ಮೇರೆಗೆ ಸರ್ಕಲ್ ಇನ್ಸ್ಪೆಕ್ಟರ್ ಕ್ಯಾತೆಗೌಡ ಹಾಗೂ ನಗರ ಠಾಣಾ ಸಬ್ ಇನ್ಸ್ಪೆಕ್ಟರ್ ಮರಿಸ್ವಾಮಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಮುನೀರ್, ಗಿರೀಶ್, ಸುನಿಲ್, ಕಾವೇರಮ್ಮ, ಮಧು, ಮುಸ್ತಫಾ, ಮಾದಯ್ಯ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.