ಕರಿಕೆ, ನ. 8: ಇಲ್ಲಿನ ಕರಿಕೆ ಕಾಲೋನಿ ಸ.ಹಿ.ಪ್ರಾ.ಶಾಲೆ ವಿದ್ಯಾರ್ಥಿಗಳು ಇತ್ತೀಚೆಗೆ ಮಡಿಕೇರಿ ಸಂತ ಜೋಸೆಫರ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲಿಕೋತ್ಸವದಲ್ಲಿ ಭಾಗವಹಿಸಿದ್ದು, ಏಳನೇ ತರಗತಿ ವಿದ್ಯಾರ್ಥಿನಿ ಕಾವ್ಯ ಎಂ.ಪಿ. ಇವಳು ಇಂಗ್ಲೀಷ್ ಕಂಠಪಾಠದಲ್ಲಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಆರನೇ ತರಗತಿಯ ವಿದ್ಯಾರ್ಥಿ ಅನುಶ್ರೀ ಪಿ.ಎಂ. ಲಘು ಸಂಗೀತದಲ್ಲಿ ತೃತೀಯ ಸ್ಥಾನ ಗಳಿಸಿದ್ದಾಳೆ ಎಂದು ಶಾಲಾ ಮುಖ್ಯೋಪಾಧ್ಯಾಯ ಕುಮಾರ್ ಎನ್.ಎಸ್. ತಿಳಿಸಿದ್ದಾರೆ.