ಕೂಡಿಗೆ, ನ. 8: ಹೆಬ್ಬಾಲೆ ಗ್ರಾಮ ಪಂಚಾಯಿತಿಯ ನಮ್ಮ ಗ್ರಾಮ ನಮ್ಮ ಯೋಜನೆಯ. ವಿಶೇಷ ಗ್ರಾಮ ಸಭೆಯು ಸ್ಥಳೀಯ ಸಮುದಾಯ ಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಎನ್. ಲತಾ ವಹಿಸಿದ್ದರು. ಸಭೆಯಲ್ಲಿ ನಮ್ಮ ಗ್ರಾಮ ಯೋಜನೆಯ ವಿಷಯಗಳ ಬಗ್ಗೆ ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ಗ್ರಾಮದ ಅಭಿವೃದ್ಧಿಯ ಯೋಜನೆಯ ಕ್ರಿಯಾಯೋಜನೆ ಕಾರ್ಯಗತಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.
ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಗ್ರಾಮಸ್ಥರು ಸಭೆಗೆ ತಿಳಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪ್ರಮೀಳಾ, ಸದಸ್ಯರುಗಳಾದ ವಿಜಯ, ದೇವಮ್ಮ, ವೆಂಕಟೇಶ ಸೇರಿದಂತೆ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು. ಗ್ರಾಮ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಕೇಶ್ ಸರ್ಕಾರದ ವಿವಿಧ ಯೋಜನೆಯ ಮಾಹಿತಿಯನ್ನು ಸಭೆಗೆ ತಿಳಿಸಿದರು.