ಮಡಿಕೇರಿ, ನ.9: ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ’, ‘ಶುಲ್ಕ ವಿನಾಯಿತಿ’, ‘ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ’ ಮತ್ತು ‘ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ’ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್, 10 ರವರೆಗೆ ಅವಧಿ ವಿಸ್ತರಿಸಲಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ತಿತಿತಿ.ಞಚಿಡಿeಠಿಚಿss.ಛಿgg.gov.iಟಿ ತಿತಿತಿ.bಚಿಛಿಞತಿಚಿಡಿಜಛಿಟಚಿses.ಞಚಿಡಿ.ಟಿiಛಿ.iಟಿ, ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗೆ ವೆಬ್ ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿses.ಞಚಿಡಿ.ಟಿiಛಿ.iಟಿ ನ್ನು ನೋಡಬಹುದು.

ಹೆಚ್ಚಿನ ಮಾಹಿತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡು ಹತ್ತಿರ, ಕಚೇರಿಯನ್ನು ಸಂಪರ್ಕಿಸಬಹುದು. ದೂ. 08272-225628 ಕರೆ ಮಾಡಿ ಮಾಹಿತಿ ಪಡೆಯಬಹುದು.