ಸಿದ್ದಾಪುರ, ನ. 9: ಮಡಿಕೇರಿಯ ನೆಹರೂ ಯುವ ಕೇಂದ್ರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಎಲಿಯಂಗಾಡ್ ಫ್ರೆಂಡ್ಸ್ ಯುವಕ ಸಂಘದ ವತಿಯಿಂದ ಎಲಿಯಂಗಾಡ್ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಎಲಿಯಂಗಾಡ್ ಫ್ರೆಂಡ್ಸ್ ಯುವಕ ಸಂಘದ ಅಧ್ಯಕ್ಷ ಅಬ್ದುಲ್ ರಹಮಾನ್ ಅಂದಾಯಿ, ಪ್ರತಿಯೊಬ್ಬರೂ ಕೂಡ ತಮ್ಮ ಪರಿಸರವನ್ನು ಶುಚಿಯಾಗಿಡಬೇಕು. ವಿದ್ಯಾರ್ಥಿಗಳು ಕೂಡ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯ ಕೆ.ಜೆ. ಲೋಕೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಂಸ, ಮುಖ್ಯ ಶಿಕ್ಷಕ ಸುಬ್ರಮಣಿ, ಸಂಘದ ಸದಸ್ಯರಾದ ಸಮದ್, ಆಲಿ, ಗಫೂರ್, ಸಾಹಿದ್ ಸೇರಿದಂತೆ ಇನ್ನಿತರರು ಇದ್ದರು. ಬಳಿಕ ಶಾಲಾ ಆವರಣವನ್ನು ಶುಚಿಗೊಳಿಸಲಾಯಿತು.