ಮಡಿಕೇರಿ, ನ.10 ಸ್ಟಾಫ್ ಸೆಲೆಕ್ಷನ್ ಕಮಿಷನ್ ವತಿಯಿಂದ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳನ್ನು ಭರ್ತಿ ಮಾಡಲು ಕಂಬೈನ್ಡ್ ಗ್ರ್ಯಾಜುವೇಟ್ ಲೆವೆಲ್ ಎಕ್ಸಾಮಿನೇಷನ್ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. 25 ಕೊನೆಯ ದಿನವಾಗಿದೆ ಹಾಗೂ ಶುಲ್ಕ ಪಾವತಿಸಲು ತಾ. 27 ಕೊನೆಯ ದಿನವಾಗಿದೆ. ಶುಲ್ಕವನ್ನು ನೆಟ್ ಬ್ಯಾಂಕಿಂಗ್ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚಲನ್ ಮುಖಾಂತರ ಪಾವತಿ ಮಾಡಬಹುದು. ಜನವರಿ 1, 2020 ಕ್ಕೆ ಅನ್ವಯವಾಗುವಂತೆ ಕನಿಷ್ಟ 18 ರಿಂದ 32 ವರ್ಷಗಳು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗಗಳು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಲ್ಲಿ ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ :hಣಣಠಿs://ssಛಿ.ಟಿiಛಿ.iಟಿ ನ್ನು ಸಂಪರ್ಕಿಸಬಹುದು.