ಮಡಿಕೇರಿ, ನ. 9 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ತಾ. 10ರಂದು (ಇಂದು) ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ತಿಳಿಸಿದ್ದಾರೆ.

ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಬೆಳಗ್ಗೆ 11 ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಉದ್ಘಾಟಿಸÀಲಿದ್ದಾರೆ ಎಂದರು.

ಮುಖ್ಯ ಭಾಷಣಕಾರರಾಗಿ ಡಾ.ಜೆ.ಸೋಮಣ್ಣ ಪಾಲ್ಗೊಳ್ಳಲಿದ್ದು, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಲಕ್ಷ್ಮೀಪ್ರಿಯ, ಜಿಲ್ಲಾಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಡಾ.ಹೆಚ್.ವಿ. ದೇವದಾಸ್, ಕರ್ಣಂಗೇರಿ ಶ್ರೀರಾಜರಾಜೇಶ್ವರಿ ದೇವಾಲಯದ ಧರ್ಮಾಧಿಕಾರಿ ಹೆಚ್.ಎಸ್. ಗೋವಿಂದರಾಜು, ಮೈಸೂರು, ಹುಣಸೂರು ಉಪವಿಭಾಗದ ಡಿವೈಎಸ್‍ಪಿ ಸುಂದರರಾಜು ವಿದ್ಯಾರ್ಥಿಗಳನ್ನು ಸನ್ಮಾನಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿ ಚಂದ್ರಶೇಖರ್, ಮಡಿಕೇರಿ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸೌಮ್ಯ ಪ್ರಕಾಶ್, ದಲಿತ ಸಂಘರ್ಷ ಸಮಿತಿಯ ಕೊಡಗು-ಮೈಸೂರು ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ, ಕುಶಾಲನಗರ ಜಿಲ್ಲಾ ಸಂಘಟನಾ ಸಂಚಾಲಕ ಹೆಚ್.ಪಿ.ಶಿವಕುಮಾರ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಪರಿಶಿಷ್ಟ ಜಾತಿ, ಪಂಗಡ ನೌಕರರ ಸಂಘದ ಪುತ್ತೂರು ವಿಭಾಗದ ಅಧ್ಯಕ್ಷ ಸಿ.ಎಸ್.ಕುಮಾರ್, ಮಡಿಕೇರಿ ಘಟಕದ ಅಧ್ಯಕ್ಷ ಬಿ.ಹೆಚ್.ಹರೀಶ್, ಮದೆ ಮಹೇಶ್ವರ ಪದವಿಪೂರ್ವ ಕಾಲೇಜಿನ ಉಪನ್ಯಾಸಕÀ ಬಿ.ಸಿದ್ದರಾಜು ಬೆಳ್ಳಯ್ಯ ಅವರುಗಳು ಪಾಲ್ಗೊಳ್ಳಲಿದ್ದಾರೆ ಎಂದು ದಿವಾಕರ್ ಮಾಹಿತಿ ನೀಡಿದ್ದಾರೆ.