ಮಡಿಕೇರಿ, ನ.10 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ರಕ್ತ ನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ, ಮಡಿಕೇರಿ ಕೊಡವ ಸಮಾಜ, ಕೊಡವ ಸಮಾಜ ಪೊಮ್ಮಕ್ಕಡ ಒಕ್ಕೂಟ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಸರ್ಕಾರಿ ಐಟಿಐ ಕಾಲೇಜು, ಕಿರಿಯ ಮಹಿಳಾ ಆರೋಗ್ಯ ತರಬೇತಿ ಕೇಂದ್ರ, ಗ್ರೀನ್ ಡಾಟ್ ಟ್ರಸ್ಟ್ ಆಶ್ರಯದಲ್ಲಿ ತಾ. 12 ರಂದು ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ನಡೆಯಲಿದೆ.
ಬೆಳಿಗ್ಗೆ 9.30 ಗಂಟೆಗೆ ನಗರದ ಕೋಟೆ ಆವರಣದಿಂದ ಜಾಥಾ ನಡೆಯಲಿದೆ. ನಂತರ ಬೆಳಿಗ್ಗೆ 10.30 ಗಂಟೆಗೆ ನಗರದ ಕೊಡವ ಸಮಾಜದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.