ಕೂಡಿಗೆ, ನ. 9: ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾಥಿಗಳಿಗೆ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಕಲಿಕಾ ಬೋಧನಾ ಉಪಕರಣ ಪ್ರದರ್ಶನ ಏರ್ಪಡಿಸಲಾಗಿತ್ತು. ಆರು ಉಪ ವಿಷಯಗಳಲ್ಲಿ 36 ಕ್ಕೆ 33 ಮಾದರಿಗಳು ವರ್ಕಿಂಗ್ ಮತ್ತು ಡಮ್ಮಿ ಮಾದರಿಗಳು ಪ್ರದರ್ಶಿಸಲ್ಪಟ್ಟವು.
2019-20ನೇ ಸಾಲಿನ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಸುಸ್ಥಿತ ಅಭಿವೃದ್ಧಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ಮುಖ್ಯ ವಿಷಯದಡಿಯಲ್ಲಿ ಮಾದರಿಗಳನ್ನು ಮಾಡುವ ಸ್ಪರ್ಧಾ ಕಾರ್ಯಕ್ರಮದಲ್ಲಿ ವೀರಾಜಪೇಟೆ ತಾಲೂಕಿನ ಸಂತ ಅನ್ನಮ್ಮ ಪ್ರೌಢಶಾಲೆಯ ಯಶ್ವಂತ್, ದೀಕ್ಷಕಿ ಸಿ.ಜಿ, ಡೇನಿಯಲ್ ವಿದ್ಯಾರ್ಥಿಗಳು ಮೂರು ಉಪ ವಿಷಯಗಳಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಉಳಿದ ಮೂರು ಉಪ ವಿಷಯಗಳಲ್ಲಿ ಅರವತೊಕ್ಲು ಸರ್ವದೈವತಾ ಪ್ರೌಢಶಾಲೆಯ ವಿದ್ಯಾರ್ಥಿ ರೋಹನ್, ಕಳತ್ಮಾಡು ಲಯನ್ಸ್ ಪ್ರೌಢಶಾಲೆಯ ವಿದ್ಯಾರ್ಥಿ ರಜತ್ ಕುಶಾಲಪ್ಪ, ವೀರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯ ವಿದ್ಯಾರ್ಥಿ ಹೇಮಂತ್ ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಶಿಕ್ಷಕರ ವಿಭಾಗದಿಂದ ಒಬ್ಬರು ಶಿಕ್ಷಕಿ ಭಾಗವಹಿಸಿದ್ದು, ಅವರು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಭಾರ ಪ್ರಾಂಶುಪಾಲರು ಹಾಗೂ ಹಿರಿಯ ಉಪನ್ಯಾಸಕ ಕೆ.ಎಸ್. ಶಿವಕುಮಾರ್ ಮಾತನಾಡಿದರು. ಆರು ಮಂದಿ ಅನುಭವಿ ಶಿಕ್ಷಕರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ಕಾರ್ಯಕ್ರಮವನ್ನು ಉಪನ್ಯಾಸಕ ಎ.ಪಿ. ಕುಮಾರ್ ನಿರ್ವಹಿಸಿದರು.