ಮಡಿಕೇರಿ, ನ. 9: ಪ್ರೊ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ 2018-19ನೇ ಸಾಲಿನ ಪ್ರತಿಭಾವಂತ ದಲಿತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ತಾ. 10 ರಂದು (ಇಂದು) ಪೂರ್ವಾಹ್ನ 11 ಗಂಟೆಗೆ ಕಾವೇರಿ ಕಲಾಕ್ಷೇತ್ರದಲ್ಲಿ ನೆರವೇರಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಡಿ.ಪಿ. ಸುಮನ್ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ದ.ಸಂ.ಸ. ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ವಹಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಬಾಳೆಲೆಯ ಉಪನ್ಯಾಸಕ ಡಾ. ಜೆ. ಸೋಮಣ್ಣ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಹೆಚ್.ವಿ. ದೇವದಾಸ್, ಕರ್ಣಂಗೇರಿಯ ಶ್ರೀ ರಾಜರಾಜೇಶ್ವರಿ ದೇವಾಲಯದ ಧರ್ಮಾಧಿಕಾರಿ ಹೆಚ್.ಎಸ್. ಗೋವಿಂದರಾಜು ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಿದ್ದಾರೆ ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.