ಮಡಿಕೇರಿ, ನ.10 : ಮಡಿಕೇರಿ ವಿದ್ಯುತ್ ಉಪ-ಕೇಂದ್ರದಿಂದ ಹೊರ ಹೋಗುವ ರಾಜಾಸೀಟ್ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ನಿರ್ವಹಿಸ ಬೇಕಿರುವದರಿಂದ ತಾ. 12 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸ ಲಾಗುವದು. ಹೊಸ ಬಡಾವಣೆ, ಇಂದಿರಾನಗರ, ಚಾಮುಂಡೇಶ್ವರಿನಗರ ಡೈರಿ ಫಾರಂ, ಎಫ್‍ಎಂಸಿ, ಮುಳಿಯ ಬಡಾವಣೆ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.