ಸುಂಟಿಕೊಪ್ಪ, ನ. 10: ಕೊಡಗರಹಳ್ಳಿ ರಾಷ್ಟ್ರೀಯ ಹೆದ್ದಾರಿ ಯನ್ನು ದಾಟುತಿದ್ದಾಗ ಪಾದಚಾರಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಕೊಡಗರಹಳ್ಳಿಯ ಅಕ್ಕಪಂಡ ಸಂತೋಷ್ ಎಂಬವರ ಕಾಫಿ ತೋಟದಲ್ಲಿ ಕೆ.ಆರ್. ನಗರದ ಬೇರ್ಯ ಗ್ರಾಮದ ನಿವಾಸಿ ರಮೇಶ್ ನಾಯಕ್ (39) ತನ್ನ ಪತ್ನಿಯೊಂದಿಗೆ ಕೂಲಿ ಕೆಲಸ ಮಾಡುತ್ತಿದ್ದು, ಭಾನುವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದಾಗ ಸುಂಟಿಕೊಪ್ಪದಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಮಡಿಕೇರಿ ಡಿಪೋಗೆ ಸೇರಿದ ಕೆಎಸ್‍ಆರ್‍ಟಿಸಿ ಬಸ್ (ಕೆಎ.19 ಎಫ್ 3216) ಡಿಕ್ಕಿಯಾಗಿದ್ದು, ರಮೇಶ್ ನಾಯಕ್ ಸ್ಥಳದಲ್ಲೇ ಅಸುನೀಗಿದ್ದಾರೆ.

ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಠಾಣಾಧಿಕಾರಿ ಬಿ. ತಿಮ್ಮಪ್ಪ ಹಾಗೂ ಸಿಬ್ಬಂದಿ ತೆರಳಿ ಪರಿಶೀಲಿಸಿ ಮಹಜರು ನಡೆಸಿ ಬಸ್ ಚಾಲಕನ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡು ಬಸ್‍ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮೃತ ರಮೇಶ್ ಪತ್ನಿ ಹಾಗೂ ಈರ್ವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.