ಗೋಣಿಕೊಪ್ಪ ವರದಿ, ನ. 10 : ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ವೀರಾಜಪೇಟೆ, ಮಡಿಕೇರಿ, ಸೋಮವಾರಪೇಟೆ ತಾಲೂಕು ಯುವ ಒಕ್ಕೂಟಗಳ ಸಹಯೋಗದಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.
ಈ ಸಂದರ್ಭ ಸ್ಥಳೀಯರಾದ ಅಬ್ದುಲ್ ಬೇಗ್, ಎಸ್. ಎಸ್. ಶೈಲೇಂದ್ರ, ಟಿ.ಎನ್. ಸುರೇಶ್, ರಶ್ಮಿ ಉತ್ತಪ್ಪ ಅವರುಗಳನ್ನು ಸನ್ಮಾನಿಸಲಾಯಿತು.
ಜಿಲ್ಲೆಯ ವಿವಿಧ ಕಡೆಗಳಿಂದ ಭಾಗವಹಿಸಿದ್ದ ಯುವ ಸಮೂಹ ರಾಗಿ ಬೀಸುವ ಪದ ಮತ್ತು ಸೋಬಾನೆ ಪದ, ಭಾವಗೀತೆ, ರಂಗಗೀತೆ, ಏಕಪಾತ್ರಾಭಿನಯ, ಗೀಗಿ ಪದ, ಕೋಲಾಟ, ಜಾನಪದ ನೃತ್ಯ, ಭಜನೆ, ಜನಪದ ಗೀತೆ ಸ್ಪರ್ಧೆಗಳಲ್ಲಿ ಪಾಲ್ಗೊಂಡಿತು.
ಈ ಸಂದರ್ಭ ಯುವ ಒಕ್ಕೂಟ ಅಧ್ಯಕ್ಷ ಪಿ. ಪಿ. ಸುಕುಮಾರನ್, ಪೊನ್ನಂಪೇಟೆ ಎ.ಪಿ.ಸಿ.ಎಂ.ಸಿ ಅಧ್ಯಕ್ಷ ಮುದ್ದಿಯಡ ಮಂಜು ಗಣಪತಿ, ಬಿಜೆಪಿ ಮುಖಂಡರಾದ ಕುಂಞಂಗಡ ಅರುಣ್ ಭೀಮಯ್ಯ, ಚೋಡುಮಾಡ ದಿನೇಶ್, ವೀರಾಜಪೇಟೆ ತಾಲೂಕು ಯುವ ಒಕ್ಕೂಟ ಅಧ್ಯಕ್ಷೆ ಶೀಲಾ ಬೋಪಣ್ಣ, ನಿಸರ್ಗ ಯುವತಿ ಮಂಡಳಿ ಅಧ್ಯಕ್ಷೆ ರೇಖಾ ಶ್ರೀಧರ್ ಇದ್ದರು.