ಮಡಿಕೇರಿ, ನ. 9: ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ 2018-19ನೇ ಸಾಲಿನ ವಾರ್ಷಿಕ ಮಹಾಸಭೆ ತಾ. 13 ರಂದು ಬೆಳಿಗ್ಗೆ 10.45 ಕ್ಕೆ ಮಡಿಕೇರಿಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಸಮೀಪದ ಬಾಲಭವನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಹೆಚ್.ಯಂ. ಮಹಮ್ಮದ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಬಿ. ರವಿ ಮತ್ತು ಬಿ. ವಿಜಯಲಕ್ಷ್ಮೀ, ಸಹಾಯಕ ನಿರ್ದೇಶಕರು, ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಕೊಡಗು ಜಿಲ್ಲೆ ಇವರು ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.