ಶ್ರೀಮಂಗಲ, ನ. 10: ಇಲ್ಲಿನ ವಿದ್ಯಾಸಂಸ್ಥೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್‍ಗಳನ್ನು ಶ್ರೀಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೋಕೀರ ಕಲ್ಪನ ಅಧ್ಯಕ್ಷತೆಯಲ್ಲಿ ಹಾಗೂ ಆಡಳಿತ ಮಂಡಳಿ ಸದಸ್ಯರ ಉಪಸ್ಥಿತಿಯಲ್ಲಿ ವಿತರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೋಕೀರ ಕಲ್ಪನ ಹಾಗೂ ಆಡಳಿತ ಮಂಡಳಿ ಖಜಾಂಚಿ ಕೆ.ಎನ್. ಸಂದೀಪ್ ಸೈಕಲ್‍ಗಳ ಬಳಕೆ ಬಗ್ಗೆ ವಿದ್ಯಾರ್ಥಿ ಹಾಗೂ ಪೋಷಕರಿಗೆ ಉತ್ತಮ ಮಾಹಿತಿ ನೀಡಿದರು. ಆಡಳಿತ ಮಂಡಳಿಯ ನಿರ್ದೇಶಕರಾದ ಮಂದಮಾಡ ಗಣೇಶ್ ಉಪಸ್ಥಿತರಿದ್ದರು.