ನಗರದ ನೂತನ ಜಿಲ್ಲಾ ಪಂಚಾಯಿತಿ ಭವನದಲ್ಲಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ಇಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.
* ಕರ್ನಾಟಕ ವಿಧಾನ ಮಂಡಲ ಸಭೆಯ ಕಾಗದ ಪತ್ರಗಳ ಸಮಿತಿ ಅಧ್ಯಕ್ಷ ಸಾ.ರಾ.ಮಹೇಶ್ ಮತ್ತು ಸದಸ್ಯರನ್ನು ಒಳಗೊಂಡ ತಂಡವು ಜಿಲ್ಲಾ ಪಂಚಾಯತ್ನ 2018-19ನೇ ಸಾಲಿನ ವಾರ್ಷಿಕ ವರದಿ ಮತ್ತು 2016-17 ರಿಂದ 2018-19 ಸಾಲಿನವರೆಗೆ ಲೆಕ್ಕ ಪರಿಶೋಧನಾ ವರದಿ ಸಂಬಂಧ ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ನೂತನ ಭವನದಲ್ಲಿ ಸಭೆ ನಡೆಸಲಿದೆ.
* ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ರಕ್ತ ನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ, ಮಡಿಕೇರಿ ಕೊಡವ ಸಮಾಜ, ಕೊಡವ ಸಮಾಜ ಪೊಮ್ಮಕ್ಕಡ ಒಕ್ಕೂಟ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕೊಡಗು, ಸರ್ಕಾರಿ ಐಟಿಐ ಕಾಲೇಜು, ಕಿರಿಯ ಮಹಿಳಾ ಆರೋಗ್ಯ ತರಬೇತಿ ಕೇಂದ್ರ, ಗ್ರೀನ್ಡಾಟ್ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ನಡೆಯಲಿದೆ.