ಕೂಡಿಗೆ, ನ. 7: ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ನಮ್ಮ ಗ್ರಾಮ ನಮ್ಮ ಯೋಜನೆಯ ವಿಶೇಷ ಗ್ರಾಮ ಸಭೆ ತಾ. 12 ರಂದು (ಇಂದು) ಗ್ರಾ.ಪಂ. ಸಭಾಂಗಣದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಭವ್ಯ ವಹಿಸಲಿದ್ದಾರೆ. ನೋಡಲ್ ಅಧಿಕಾರಿಯಾಗಿ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್ ಭಾಗವಹಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಜಿ.ಪಂ. ಸದಸ್ಯರಾದ ಮಂಜುಳಾ, ತಾ.ಪಂ. ಸದಸ್ಯೆ ಪುಷ್ಪ ಗ್ರಾ.ಪಂ. ಉಪಾಧ್ಯಕ್ಷ ತಾರಾನಾಥ ಸೇರಿದಂತೆ ಸದಸ್ಯರು ಭಾಗವಹಿಸಲಿ ದ್ದಾರೆ ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಾಜಶೇಖರ ತಿಳಿಸಿದ್ದಾರೆ.