ಕುಶಾಲನಗರ, ನ 11: ಹುಣ್ಣಿಮೆ ಅಂಗವಾಗಿ ಜೀವನದಿ ಕಾವೇರಿಗೆ ತಾ. 12ರಂದು (ಇಂದು) 100ನೇ ಮಹಾ ಆರತಿ ಕಾರ್ಯಕ್ರಮ ಜರುಗಲಿದೆ. ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ನದಿ ತಟದಲ್ಲಿ ಸಂಜೆ 4 ಗಂಟೆಯಿಂದ ಭಜನಾ ಕಾರ್ಯಕ್ರಮ, ನಂತರ ಧಾರ್ಮಿಕ ಕಾರ್ಯಕ್ರಮಗಳು ನಡೆದು ನದಿಗೆ ಮಹಾ ಆರತಿ ಬೆಳಗಲಾಗುವದು.
ಕಾರ್ಯಕ್ರಮದಲ್ಲಿ ಅರೆಮಾದನಹಳ್ಳಿ ಶ್ರೀ ವಿಶ್ವಕರ್ಮ ಜಗದ್ಗುರು ಮಠದ ಶ್ರೀ ಶಿವಸುಜ್ಞಾನತೀರ್ಥ ಮಹಾಸ್ವಾಮಿಗಳು, ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಪಾಲ್ಗೊಳ್ಳುವರು ಎಂದು ಮಹಾ ಆರತಿ ಬಳಗದ ಪ್ರಕಟಣೆ ತಿಳಿಸಿದೆ.