ಸೋಮವಾರಪೇಟೆ, ನ. 11: ಮಡಿಕೇರಿಯ ಸಂತ ಮೈಕಲರ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಇಲ್ಲಿನ ಸಾಂದೀಪನಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಎಸ್. ಸುಧನ್ವ, ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಸಂಸ್ಕøತ ಧಾರ್ಮಿಕ ಪಠಣ ವಿಭಾಗದಲ್ಲಿ ಕಳೆದ ಎರಡು ವರ್ಷಗಳಿಂದಲೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ಸುಧನ್ವ, ಪ್ರಸಕ್ತ ವರ್ಷವೂ ಪ್ರಥಮ ಸ್ಥಾನ ಗಳಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಇವರು ಚೌಡ್ಲು-ಆಲೇಕಟ್ಟೆ ಗ್ರಾಮದ ಶ್ರೀಕಾಂತ್-ಅರ್ಚನ ದಂಪತಿಯ ಪುತ್ರ.