ವೀರಾಜಪೇಟೆ: ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಇತ್ತಿಚೆಗೆ ಕೂಡಿಗೆಯಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪಟ್ಟಣದ ಸಂತ ಅನ್ನಮ್ಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾಮಟ್ಟದ ಸ್ಫರ್ಧೆಯಲ್ಲಿ ಭಾಗವಹಿಸಿದ ಸಂತ ಅನ್ನಮ್ಮ ಪ್ರೌಢಶಾಲೆಯ ಹೇಮಂತ್, ಡೇನಿಯಲ್, ದೀಕ್ಷಿತ್ ಸಿ.ಜೆ., ನಿರಂಜನ್, ಸಬೀನ್ ಹಾಗೂ ಭರತ್ ರಾಜ್ಯಮಟ್ಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಗಳು ಶಾಲೆಯ ಶಿಕ್ಷಕರಾದ ಲಕ್ಷೀಶ್, ಜೊನಾಥನ್ ಹಾಗೂ ರೂಪ ಅವರ ಮಾರ್ಗದರ್ಶನದಲ್ಲಿ ವಿಜ್ಞಾನದ ಮಾದರಿಗಳನ್ನು ತಯಾರಿಸಿದ್ದಾರೆ.ಪೊನ್ನಂಪೇಟೆ: ಕೂಡಿಗೆ ಡಯೆಟ್ನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅರ್ವತೊಕ್ಲುವಿನ ಸರ್ವಧೈವತಾ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾದ ರೋಹನ್ ಅಪ್ಪಚ್ಚು ಹಾಗೂ ಎನ್.ಎಸ್. ಮೋಹನ್ ಪ್ರಥಮ ಸ್ಥಾನವನ್ನು ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಶಾಲೆಯ ಕಿಲನ್ ಗಣಪತಿ ಹಾಗೂ ಪಿ.ಪಿ. ಅಯ್ಯಪ್ಪ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.ನಾಪೆÇೀಕ್ಲು: ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಒಂದರಿಂದ ನಾಲ್ಕನೇ ತರಗತಿ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಬೇತು ಗ್ರಾಮದ ಎಕ್ಸೆಲ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಾದ ದರ್ಶ ದೇಚಮ್ಮ, ಜಗನ್ಮಯಿ, ಮೇಘನಾ ಟಿ.ಜಿ ಹಾಗೂ ದುಂದುಭಿ ಪಿ.ಬಿ. ಆಯ್ಕೆಯಾಗಿದ್ದಾರೆ.