ಮಡಿಕೇರಿ, ನ. 11: ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ದೇವಾಲಯದ ಮುಂಭಾಗದಲ್ಲಿರುವ ಕಲ್ಯಾಣಿಯಲ್ಲಿ ತೆಪ್ಪೋತ್ಸವ ಕಾರ್ಯಕ್ರಮ ತಾ. 12, 16 ಮತ್ತು 17 ರಂದು ಸಂಜೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೋರಿದ್ದಾರೆ.