ಮಡಿಕೇರಿ, ನ. 11: ಸಂಪಾಜೆ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ನಡೆಯಿತು. ನಮ್ಮ ಗ್ರಾಮ ನಮ್ಮ ಯೋಜನೆಯ ವಿಶೇಷ ಗ್ರಾಮಸಭೆ ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಮಾರ್ ಚೆದ್ಕಾರ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಂಚಾಯಿತಿ ನೋಡೆಲ್ ಅಧಿಕಾರಿ ಕೆ.ಎಸ್. ಚಂದ್ರಶೇಖರ್, ಶೋಭಾರಾಣಿ ಮತ್ತು ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳು, ಗ್ರಾಮಸ್ಥರು ಭಾಗವಹಿಸಿದ್ದರು. ಸಭೆಯಲ್ಲಿ ಅಧ್ಯಕ್ಷರ ಅನುಮತಿ ಮೇರೆಗೆ ಜಮಾ ಖರ್ಚಿನ ವಿವರ ಮತ್ತು ಸಂಪಾಜೆ ಗ್ರಾಮ ವ್ಯಾಪ್ತಿಯ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು.