ಮಡಿಕೇರಿ, ನ.12: ಯುವಜನರು ಪೌಷ್ಟಿಕ ಆಹಾರ ಸೇವಿಸಿ ಆರು ತಿಂಗಳಿಗೊಮ್ಮೆ ರಕ್ತದಾನ ಮಾಡಿ. ಇದರಿಂದ ಬೇರೆಯವರ ಪ್ರಾಣ ಉಳಿಸುವದಲ್ಲದೆ, ತಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಶಾಸಕÀ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ರಕ್ತ ನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಮಡಿಕೇರಿ, ಕೊಡವ ಸಮಾಜ ಪೊಮ್ಮಕ್ಕಡ ಒಕ್ಕೂಟ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕೊಡಗು ಸರ್ಕಾರಿ ಐ.ಟಿ.ಐ ಕಾಲೇಜು, ಕಿರಿಯ ಮಹಿಳಾ ಆರೋಗ್ಯ ತರಬೇತಿ ಕೇಂದ್ರ, ಗ್ರೀನ್ ಡಾಟ್ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯ ‘ಜೀವಿತಾವಧಿಯಲ್ಲಿ ಒಮ್ಮೆಯಾದರು ರಕ್ತದಾನ ಮಾಡಿ’ ಎಂಬ ಘೋಷವಾಕ್ಯದೊಂದಿಗೆ ನಗರದ ಕೊಡವ ಸಮಾಜದಲ್ಲಿ ನಡೆಯಿತು.

ವಾಹನ ಚಾಲನೆ ಸಂದರ್ಭದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಹೆಲ್ಮೆಟ್ ಕಡ್ಡಾಯವಾಗಿ ಬಳಸುವಂತಾಗಬೇಕು. ಇಲ್ಲದಿದ್ದಲ್ಲಿ ತಲೆಭಾಗಕ್ಕೆ ಗಾಯವಾಗುತ್ತದೆ. ಇದರಿಂದ ರಕ್ತಸ್ರಾವವಾಗುತ್ತದೆ. ಎಲ್ಲರೂ ಪ್ರಥಮ ಚಿಕಿತ್ಸೆ ಕಲಿಯಬೇಕು ಎಂದು ಶಾಸಕರು ಸಲಹೆ ಮಾಡಿದರು.

ಯೋಗ, ವ್ಯಾಯಾಮವನ್ನು ಪ್ರತಿನಿತ್ಯ ಮಾಡುವದರಿಂದ ಯಾವದೇ ಕಾಯಿಲೆ ಬರುವದಿಲ್ಲ. ಆರೋಗ್ಯವೇ ಭಾಗ್ಯ. ಆರೋಗ್ಯ ಕಾಪಾಡಿಕೊಳ್ಳಿ, ಶ್ರಮದಿಂದ ಕೆಲಸ ಮಾಡಿದರೆ ಗೆಲವು ಇರುತ್ತದೆ ಎಂದರು. ಜಿ.ಪಂ.ಉಪಾಧ್ಯಕ್ಷೆÀ ಲೋಕೇಶ್ವರಿ ಗೋಪಾಲ್ ಮಾತನಾಡಿ; ರಕ್ತದಾನ ಮಹಾದಾನ. ರಕ್ತದಾನದಿಂದ ರೋಗಿಗಳಿಗೆ ಸರಿಯಾದ ಸಮಯಕ್ಕೆ ರಕ್ತ ಒದಗಿಸಲು ಸಹಕಾರಿಯಾಗುತ್ತದೆ. ಇದರಿಂದ ಪ್ರಾಣ ಉಳಿಸಬಹುದು ಎಂದು ಹೇಳಿದರು.

ರಕ್ತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಯುವಜನರು ರಕ್ತದಾನ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು. ಇದರಿಂದ ಆರೋಗ್ಯವಂತರಾಗಿರಬಹುದು ಎಂದು ಡಾ.ಎನ್. ಆನಂದ್ ಹೇಳಿದರು. ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಮಾತನಾಡಿ 18-60 ವರ್ಷದವರೆಗೆ ಆರು ತಿಂಗಳಿಗೊಮ್ಮೆ ರಕ್ತದಾನ ಮಾಡಿದರೆ ದೇಹದಲ್ಲಿ ಕೊಬ್ಬಿನಾಂಶ ಕಡಿಮೆಯಾಗುತ್ತದೆ ಹಾಗೂ ಖಾಯಿಲೆಗಳು ಬಾರದಂತೆ ರಕ್ಷಿಸುತ್ತದೆ ಎಂದು ಅವರು ಹೇಳಿದರು.

ಅತಿ ಹೆಚ್ಚು ರಕ್ತದಾನ ಮಾಡಿರುವ ಸುದೀಂದ್ರ ಅವರು 28 ಬಾರಿ, ಡಾ.ಆನಂದ್ 13 ಬಾರಿ ಹಾಗೂ ಭಾಗ್ಯಲಕ್ಷ್ಮೀ ಅವರು 7 ಬಾರಿ ಅವರುಗಳನ್ನು ಸನ್ಮಾನಿಸಲಾಯಿತು. ಪ್ರಬಂಧ ಸ್ಪರ್ಧೆಯಲ್ಲಿ ಗೆದ್ದಿರುವ ಐಟಿಐ ಕಾಲೇಜಿನ ವಿದ್ಯಾರ್ಥಿಗಳಾದ ಚೇತನ್ ಕೆ.ಎನ್, ಕಾರ್ತಿಕ್ ನಾಚಪ್ಪ, ನೂತನ್ ಎನ್.ಎನ್ ಅವರಿಗೆ ಬಹುಮಾನ ವಿತರಿಸಲಾಯಿತು.